ತಂತ್ರಜ್ಞಾನದ ಪ್ರಯೋಜನ, ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯ: ಕೆ.ಎಂ.ಗಾಯಿತ್ರಿ

blank

ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದಿಂದ ಸುರಕ್ಷಿತ ಇಂಟರ್‌ನೆಟ್ ದಿನದ ಅಂಗವಾಗಿ ನಗರದಲ್ಲಿ ಮಂಗಳವಾರ ಕಾರ್ಯಾಗಾರ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಚಾಲನೆ ನೀಡಿ, ದೈನಂದಿನ ಜೀವನದಲ್ಲಿ ತಂತ್ರಜ್ಞಾನ ಹೆಚ್ಚಾಗಿ ಆವರಿಸಿದ್ದು, ತಂತ್ರಜ್ಞಾನದ ಪ್ರಯೋಜನ ಹಾಗೂ ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯವಿದೆ. ಅಪರಾಧಗಳನ್ನು ತಡೆಗಟ್ಟಲು, ಸಮಾಜದ ಮೇಲೆ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದು ಹೇಳಿದರು.
ತಂತ್ರಜ್ಞಾನ ಬಳಕೆಯಿಂದ ವಿವಿಧ ರೀತಿಯಲ್ಲಿ ಮೋಸ ಮಾಡುವ ಪ್ರವೃತ್ತಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿರುವುದು ಕಂಡು ಬರುತ್ತಿದೆ. ಆದ್ದರಿಂದ ಯಾವುದೇ ಆಮಿಷಗಳಿಗೆ ಒಳಗಾಗದೇ ಅಂತರ್ಜಾಲದ ಉಪಯೋಗಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡು ವಂಚಿತರಾಗದೆ ಬದುಕು ನಡೆಸಿ ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಮಾತನಾಡಿ, ಕಾಲ ಬದಲಾದಂತೆ ತಂತ್ರಜ್ಞಾನವು ಆಲದ ಮರದಂತೆ ಬೆಳೆದಿದ್ದು, ಮನುಷ್ಯನಿಗಿಂತ ಸಾವಿರಪಟ್ಟು ಬೆಳೆಯುತ್ತಿದೆ. ಇದರಿಂದ ತಂತ್ರಜ್ಞಾನದ ಅರಿವು ಮೊದಲು ಅಗತ್ಯವಾಗಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಗತ್ಯವಿರುವ ತಂತ್ರಜ್ಞಾನದ ಅರಿವು, ಮೋಸ ಹೋಗದಂತೆ ಸೈಬರ್ ಜಾಗೃತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಚೇರಿಗಳಲ್ಲಿ ನಿಮ್ಮ ವೈಯಕ್ತಿಕ ಲಾಗಿನ್‌ಗಳ ಬಗ್ಗೆ ಅರಿವಿನ ಜತೆಗೆ ಇತರರಿಗೆ ಲಾಗಿನ್‌ಗಳನ್ನು ಶೇರ್ ಮಾಡದಂತೆ ಎಚ್ಚರಿಕೆ ವಹಿಸಬೇಕು. ಸೈಬರ್ ವಂಚನೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ತಾವು ಯಾವ ತಾಣವನ್ನು ಉಪಯೋಗಿಸುತ್ತೀರೋ ಅದರ ಕುರಿತು ಮೊದಲು ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶಿಲ್ಪಾ ಅವರು, ಸಂಪನ್ಮೂಲ ವ್ಯಕ್ತಿಗಳಾಗಿ ದೈನಂದಿನ ಜೀವನದಲ್ಲಿ ಇಂಟರ್‌ನೆಟ್ ಬಳಕೆ, ಇಂಟರ್‌ನೆಟ್ ಅಪಾಯಗಳು, ಆನ್‌ಲೈನ್ ವಂಚನೆ, ಸೈಕಾಲಾಜಿಕಲ್ ವಂಚನೆ, ಬ್ಯಾಂಕಿಂಗ್ ವಂಚನೆ, ಮೋಸ ಹೋಗದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸುದರ್ಶನ್ ಸೇರಿದಂತೆ ಇತರರು ಇದ್ದರು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…