ಮಹಿಳಾ ದೌರ್ಜನ್ಯ ವಿರುದ್ಧ ಜಾಗೃತಿ : ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಭರವಸೆ

awareness
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸುಳ್ಯಕ್ಕೆ ಆಗಮಿಸಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸಹಿತ ಕಾಂಗ್ರೆಸ್ ಮುಖಂಡರು ಹೂ ಗುಚ್ಚ ನೀಡಿ ಸ್ವಾಗತಿಸಿದರು.
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಮಹಿಳಾ ದೌರ್ಜನ್ಯದ ವಿರುದ್ಧ ರಾಜ್ಯ ಮಹಿಳಾ ಆಯೋಗ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಆಯೋಗದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿ ಸುದ್ದಿಗಾರರ ಜತೆ ಮಾತನಾಡಿದ್ದು, ಈ ಸಂದರ್ಭ ನೇಹಾ ಹಾಗೂ ಅಂಜಲಿ ಹತ್ಯೆ ಕುರಿತು ಪ್ರಸ್ತಾಪಿಸಿ ಮಾತನಾಡಿದರು.

ಇದಕ್ಕೂ ಮೊದಲು ನಾಗಲಕ್ಷ್ಮೀ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಜ್ಯೋತಿ ವೃತ್ತದ ಬಳಿ ಹೂಗುಚ್ಚ ನೀಡಿ ಸ್ವಾಗತಿಸಿದ್ದು. ಬಳಿಕ ಸನ್ಮಾನಿಸಲಾಯಿತು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಹೈಕೋರ್ಟ್ ಫೀಡರ್ ವಕೀಲ ವಹೀದಾ ಹಾರೀಸ್ ತೆಕ್ಕಿಲ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಹಾಜಿ ಮುಸ್ತಫ ಜನತಾ, ಸುಳ್ಯ ನಗರ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ರಾಜು ಪಂಡಿತ್, ಬೆಂಗಳೂರು ಫಾರ್ವರ್ಡ್ ಗ್ರೂಪ್ ಹಾರೀಸ್ ತೆಕ್ಕಿಲ್, ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ಕೆ.ಟಿ ವಿಶ್ವನಾಥ್, ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ವಕೀಲ ಅಬೂಬಕ್ಕರ್ ಹನೀಫ್ ಬೀಜಕೊಚ್ಚಿ, ಫಾತಿಮಾ ಶಿಬಾ ಬೀಜಕೊಚ್ಚಿ, ಸಲೀಂ ಪೆರಂಗೋಡಿ, ಭೋಜಪ್ಪ ನಾಯ್ಕ ಉಪಸ್ಥಿತರಿದ್ದರು.

ನೇಹಾ ಹಾಗೂ ಅಂಜಲಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಬೇಜವಬ್ದಾರಿ ತೋರಿದ ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಅಮಾನತ್ತಿನಲ್ಲಿ ಇಟ್ಟಿದ್ದು, ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ನ್ಯಾಯ ದೊರಕಿಸಿಕೊಡುವಲ್ಲಿ ಸಂಪೂರ್ಣ ಪ್ರಯತ್ನ ಮಾಡಲಾಗುತ್ತದೆ.- ನಾಗಲಕ್ಷ್ಮೀ ಚೌಧರಿ, ಅಧ್ಯಕ್ಷೆ, ರಾಜ್ಯ ಮಹಿಳಾ ಆಯೋಗ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net