ನರೇಗಲ್ಲ: ಮೂಢನಂಬಿಕೆ, ಜಾತಿ ಪದ್ಧತಿ, ಅಸಮಾನತೆ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಎಸ್ಡಿಎಂಸಿ ಅಧ್ಯಕ್ಷ ಆನಂದ ಕೊಟಗಿ ಹೇಳಿದರು.
ಸ್ಥಳೀಯ ಸರ್ಕಾರಿ ಕನ್ನಡ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ಕಾಯಕ ಶರಣರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ ಎಂದರು. ಮುಖ್ಯ ಶಿಕ್ಷಕ ಬಸವರಾಜ ಕುರಿ, ಎನ್.ಎಲ್. ಚೌವಾಣ, ಎಸ್.ಐ. ಜಗಾಪುರ, ಎಂ.ಪಿ. ಅಣಗೌಡರ. ಖ.ವಿ. ಕಳ್ಳಿ, ಜೆ. ಎ. ಪಾಟೀಲ, ಎಂ.ಎಸ್. ಮಾಳಶೆಟ್ಟಿ, ರಾಜೇಶ್ವರಿ ತೊಂಡಿಹಾಳ, ಸಿಂಧು ಗುಡಿಸಾಗರ, ವಿದ್ಯಾರ್ಥಿಗಳು ಇದ್ದರು.
ಪ.ಪಂ ಯಲ್ಲಿ: ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ಕಾಯಕ ಶರಣರ ಜಯಂತ್ಯುತ್ಸವ ಆಚರಿಸಲಾಯಿತು. ಪ.ಪಂ. ಅಧ್ಯಕ್ಷ ಫಕೀರಪ್ಪ ಮಳ್ಳಿ. ಸ್ಥಾಯಿ ಕಮಿಟಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ, ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ವೆಂಕಟೇಶ ಮಡಿವಾಳರ, ರಮೇಶ ಹಲಗಿಯವರ, ಶಂಕ್ರಪ್ಪ ದೊಡ್ಡಣ್ಣವರ, ಆರೀಫ್ ಮಿರ್ಜಾ, ಸಂಜೀವ ಗುಡಿಮನಿ, ಎನ್.ಬಿ. ಬೇಲೇರಿ, ಕಾವ್ಯಾ ಅರವಟಗಿಮಠ, ನೀಲಪ್ಪ ಚಳ್ಳಮರದ, ಜಮೀಲಾಬೇಗಂ ಬಂಕಾಪೂರ ಸೇರಿದಂತೆ ಇತರರಿದ್ದರು.