More

    ಸೈಬರ್ ಅಪರಾಧ ತಡೆಗೆ ಅರಿವು ಅಗತ್ಯ

    ಶಿವಮೊಗ್ಗ: ಸೈಬರ್ ಅಪರಾಧಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದರೆ ಮೋಸ ಹೋಗಬಹುದಾದ ಸನ್ನಿವೇಶಗಳಿಂದ ಮುಕ್ತಿ ಪಡೆಯಬಹುದು ಎಂದು ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ನಿರ್ದೇಶಕ ಪಿ.ಜೇಸುದಾಸ್ ತಿಳಿಸಿದರು.

    ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಸೈಬರ್ ಅಪರಾಧ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಸೈಬರ್ ಅಪರಾಧದ ಜಾಲ ವಿಸ್ತಾರವಾಗುತ್ತಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ಮೋಸ ಮಾಡುವವರೂ ಇರುತ್ತಾರೆ. ಈ ನಿಟ್ಟಿನಲ್ಲಿ ಜನರು ಅರಿವು ಮೂಡಿಸಿಕೊಳ್ಳಬೇಕು ಎಂದರು.
    ಸೈಬರ್ ಕ್ರೈಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಮಾತನಾಡಿ, ಹಲವು ಸಾರ್ವಜನಿಕರು ಸೈಬರ್ ಅಪರಾಧದಿಂದ ಪರಿತಪಿಸುತ್ತಿದ್ದಾರೆ. ವಂಚನೆಯಾಗಿರುವುದು ತಿಳಿದುಬಂದರೆ ಕೂಡಲೇ ಸೈಬರ್ ಕ್ರೈಂ ಠಾಣೆಯನ್ನು ಸಂಪರ್ಕಿಸಿ ದೂರು ಸಲ್ಲಿಸಿದರೆ ಪ್ರಕರಣ ಬಗೆಹರಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ. ನಾಗರಾಜ್ ಪರಿಸರ, ಕಾಲೇಜಿನ ಪ್ರಾಚಾರ್ಯೆ ಡಾ. ಎನ್.ರಾಜೇಶ್ವರಿ, ಪ್ರಾಧ್ಯಾಪಕಿ ಪ್ರೊ. ಕೆ.ಪಿ.ಲತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts