More

  ಜ್ಞಾನ ವಿಕಾಸ ಕೇಂದ್ರದಲ್ಲಿ ಅರಿವಿನ ಪಾಠ

  ಹನಗೋಡು: ಜ್ಞಾನ ವಿಕಾಸ ಕೇಂದ್ರದಲ್ಲಿ ಕುಟುಂಬ ನಿರ್ವಹಣೆ, ಆರೋಗ್ಯ ಮತ್ತು ಕಾನೂನಿನ ಬಗ್ಗೆ ತಿಳಿವಳಿಕೆ ಪಡೆಯಬಹುದು ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ರೂಪಾ ನಂದೀಶ್ ತಿಳಿಸಿದರು.

  ಹನಗೋಡು ಹೋಬಳಿಯ ಬಿ.ಆರ್. ಕಾವಲು ಗ್ರಾಮದಲ್ಲಿ ಶುಕ್ರವಾರ ಶಿವಪಾರ್ವತಿ ಜ್ಞಾನ ವಿಕಾಸ ಕೇಂದ್ರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಮಹಿಳೆಯರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವು ಪ್ರಯೋಜನ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ. ಇದಲ್ಲದೆ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದರಿಂದ ಜನರ ಸಮಸ್ಯೆಗಳಿಗೆ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾನೂನು ಅರಿವಿನ ಮಾಹಿತಿ ಪಡೆದು ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

  ಕಡೆಮನುಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳೇಗೌಡ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ತಾಲೂಕು ಯೋಜನಾಧಿಕಾರಿ ನಾರಾಯಣಶೆಟ್ಟಿ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ದಾ.ರಾ.ಮಹೇಶ್, ಪ್ರವೀಣ್, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಸುನಂದಾ, ಒಕ್ಕೂಟದ ಅಧ್ಯಕ್ಷೆ ತಾಯಮ್ಮ, ಸೇವಾ ಪ್ರತಿನಿಧಿಗಳಾದ ಗಾಯತ್ರಿ, ನಾಗಮಣಿ ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts