More

  ಮತದಾನ ಹೆಚ್ಚಳಕ್ಕೆ ಜಾಗೃತಿ ಮ್ಯಾರಥಾನ್ ಇಂದು

  ಔರಾದ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳಕ್ಕಾಗಿ ಬುಧವಾರ ಮತದಾನ ಜಾಗೃತಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಜಿಯಾವುಲ್ಲಾ ಕೆ. ಹೇಳಿದರು.

  ತಹಸಿಲ್​ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಔರಾದ್, ಕಮಲನಗರ ಕ್ಷೇತ್ರದ ವ್ಯಾಪ್ತಿಯ ಕಡಿಮೆ ಮತದಾನವಾಗುವ ಪ್ರದೇಶದಲ್ಲಿ ಮತದಾನ ಹೆಚ್ಚಿಸುವ ಉದ್ದೇಶದಿಂದ ಮ್ಯಾರಥಾನ್ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

  ಪಟ್ಟಣದ ಕನ್ನಡಾಂಬೆ ವೃತ್ತದಿಂದ ತಹಸಿಲ್​ ಕಚೇರಿಯವರೆಗೆ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸೇರಿ ಸುಮಾರು ೭೦೦-೮೦೦ ಜನ ಭಾಗವಹಿಸಲಿದ್ದಾರೆ. ಇಲಾಖೆಯ ಸಿಬ್ಬಂದಿ ವಿವಿಧ ಕಲರ್ ಡ್ರೆಸ್‌ನಲ್ಲಿ ಭಾಗವಹಿಸುವಂತೆ ತಿಳಿಸಿದರು.

  ಔರಾದ್-ಕಮಲನಗರ ಸೇರಿ ಒಟ್ಟು ಕ್ಷೇತ್ರದಲ್ಲಿ ೨೫೫ ಮತಗಟ್ಟೆಗಳಿದ್ದು, ಇವಿಎಂ ಯಂತ್ರ ಸೇರಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನಲ್ಲಿ ೫೧ ಸೂಕ್ಷ್ಮ ಮತಗಟ್ಟೆಗಳಿವೆ. ಸಿಸಿ ಟಿವಿ, ವೆಬ್​ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಯಲ್ಲಿ ವಿದ್ಯುತ್, ನೀರು, ಊಟ ವ್ಯವಸ್ಥೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

  ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ, ಔರಾದ್-ಕಮಲನಗರ ತಾಲೂಕು ಸೇರಿ ಒಟ್ಟು ೨,೨೪,೩೦೪ ಮತದಾರರಿದ್ದಾರೆ. ಈ ಪೈಕಿ ೧,೧೬,೦೮೯ ಪುರುಷ, ೧,೦೮,೨೧೫ ಮಹಿಳಾ ಮತದಾರರಿದ್ದಾರೆ. ಔರಾದ್ ತಾಲೂಕಿನಲ್ಲಿ ೧೪೯, ಕಮಲನಗರ ತಾಲೂಕಿನಲ್ಲಿ ೧೦೬ ಮತಗಟ್ಟೆಗಳಿವೆ ಎಂದರು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts