ಬಿಇಎಂ ಶಾಲೆಯಲ್ಲಿ ಜಾಗೃತಿ ಮೆರವಣಿಗೆ

New Project (4)
Published on

ಕಾಸರಗೋಡು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಿಇಎಂ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಬಗ್ಗೆ ಕಾಸರಗೋಡು ನಗರದಲ್ಲಿ ಮೆರವಣಿಗೆ ಹಾಗೂ ಹಳೇ ಬಸ್ ನಿಲ್ದಾಣ ವಠಾರದಲ್ಲಿ ನತ್ಯ ಕಾರ್ಯಕ್ರಮ ಆಯೋಜಿಸಲಾಯಿತು.

ಬಳಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ಟೌನ್ ಸಬ್‌ಇನ್‌ಸ್ಪೆಕ್ಟರ್ ಶಶಿಧರನ್ ಅವರು ತೆಂಗಿನ ಗಿಡ ನೆಟ್ಟು ಉದ್ಘಾಟಿಸಿದರು.

ಪ್ರಾಂಶುಪಾಲ ರಾಜೇಶ್‌ಚಂದ್ರ, ನಗರಸಭಾ ಸದಸ್ಯೆ ಶ್ರೀಲತಾ, ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ಶಿಕ್ಷಕ ರಕ್ಷಕ ಸಂದ ಅಧ್ಯಕ್ಷ ಪ್ರೇಮ್‌ಜಿತ್, ಪ್ರಾಧ್ಯಾಪಕ ಶಾಜಿ, ಹರಿನಾಥ್, ಎನ್‌ಸಿಸಿ, ಗೈಡ್ಸ್ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net