20.8 C
Bangalore
Sunday, December 8, 2019

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿಷೇಧದ ಅರಿವು

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮೈಸೂರು: ಸ್ವಚ್ಛ ಸರ್ವೇಕ್ಷಣಾ-2020ರ ಸರ್ವೇ ಕಾರ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಮರ್ಪಕ ನಿರ್ವಹಣೆ ಗಣನೀಯ ಅಂಶವಾಗಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ನಿಷೇಧ ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಗುರುವಾರ ಮಹಾನಗರ ಪಾಲಿಕೆ ನಗರದ ಎಲ್ಲ ಶಾಲೆಗಳಲ್ಲೂ ಡಸ್ಟ್‌ಬಿನ್‌ಗಳನ್ನು ಇರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದೆ. ಗುರುವಾರ ಸಾಂಕೇತಿಕವಾಗಿ ಕುವೆಂಪುನಗರದ ವಿದ್ಯಾವರ್ಧಕ ಶಾಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹ ಮತ್ತು ಶ್ರಮದಾನ ಮಾಡುವ ಮೂಲಕ ಅರಿವು ಮೂಡಿಸಲಾಯಿತು.

ಶಾಲಾ ಮಕ್ಕಳು ಬೆಳಗ್ಗೆಯೇ ಕೈಗೆ ಗ್ಲೌಸ್ ತೊಟ್ಟು, ಪೊರಕೆ ಹಿಡಿದು ಶಾಲಾ ಆವರಣವನ್ನು ಸ್ವಚ್ಛಗೊಳಿಸಿದರು. ಶಾಲೆಯ ಸುತ್ತಮುತ್ತಲಿನ ರಸ್ತೆ ಹಾಗೂ ಪ್ರದೇಶವನ್ನು ಶುಚಿಗೊಳಿಸಿದರಲ್ಲದೆ, ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಮಕ್ಕಳ ದಿನವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಿಂದ ತಂದಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಪಾಲಿಕೆ ನೀಡಿದ್ದ ಡಸ್ಟ್‌ಬಿನ್‌ಗೆ ಹಾಕಿದರು. ಅಲ್ಲದೆ, ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಇದಕ್ಕೆೆ ಪರ್ಯಾಯವಾಗಿ ಯಾವ ವಸ್ತುಗಳನ್ನು ಬಳಸಬಹುದು ಎಂಬ ಪ್ರಾತ್ಯಕ್ಷಿಕೆ ನೀಡಿದರು. ಕೆಲ ಶಾಲೆಗಳಲ್ಲಿ ಪ್ಲಾಸ್ಟಿಕ್ ಬದಲಾಗಿ ಪೇಪರ್ ಬ್ಯಾಗ್ ಎಂಬ ಸಂದೇಶ ದೊಂದಿಗೆ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪಾಲಿಕೆ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿ ದರು. ಆರೋಗ್ಯಾಧಿಕಾರಿ ಡಾ.ನಾಗರಾಜ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಅರಣ್ಯ ಪ್ರದೇಶ ನಾಶವಾಗಿ, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜತೆಗೆ ವಾಯುಮಾಲಿನ್ಯ ಉಂಟಾಗುತ್ತದೆ. ಪ್ಲಾಸ್ಟಿಕ್ ಬಳಕೆ ದೀರ್ಘಾವಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟು ಮಾಡುತ್ತದೆ. ಹೀಗಾಗಿ, ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದರು.

ಮೇಯರ್ ಪುಷ್ಪಲತಾ ಜಗನ್ನಾಥ್, ಆಯುಕ್ತ ಗುರುದತ್ತ ಹೆಗಡೆ, ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ ದಿನೇಶ್ ಇತರರಿದ್ದರು.
 

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...