

ಹೆಬ್ರಿ: ಸ್ವಾತಂತ್ರೃಕ್ಕೆ ನಮ್ಮ ಹಿರಿಯರ ತ್ಯಾಗ, ಬಲಿದಾನ ಯುವ ಪೀಳಿಗೆಗೆ ನೆನಪಿನಲ್ಲಿಟ್ಟುಕೊಳ್ಳಬೇಕು. ಹಿರಿಯರು ತಂದುಕೊಟ್ಟ ಸ್ವಾತಂತ್ರೃ ಉಳಿಸುವ, ಪೀಳಿಗೆಗೆ ತಲುಪಿಸುವ, ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹೇಳಿದರು.
ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಧ್ವಜಾರೋಹಣ ಗುರುವಾರ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಎಸ್.ಆರ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಶಾಂತ್, ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪ ಪ್ರಾಂಶುಪಾಲ ದೀಪಕ್ ಎನ್., ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜು ಶಿಕ್ಷಕ ಅಮೃತ್ ಕಾರ್ಯಕ್ರಮ ನಿರೂಪಿಸಿದರು.