More

    ಬಜಾರ್ ರಸ್ತೆಯಲ್ಲಿ ಏಕಮುಖ ಸಂಚಾರ

    ಲಕ್ಷ್ಮೇಶ್ವರ: ಪಟ್ಟಣದ ಮುಖ್ಯ ಬಜಾರ್ ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಏಕಮುಖ ಸಂಚಾರ ಹಾಗೂ ಸಂಚಾರ ನಿಯಮಗಳು ಕಟ್ಟುನಿಟ್ಟಿನ ಜಾರಿಗಾಗಿ ಸೋಮವಾರ ಪುರಸಭೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡರು.
    ಮುಖ್ಯಾಧಿಕಾರಿ ಮಹೇಶ ಹಡಪದ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಪುರಸಭೆ ಸಿಬ್ಬಂದಿ ಫುಟ್‌ಪಾತ್ ಮೇಲಿನ ಇರಿಸಿದ್ದ ಹೆಚ್ಚುವರಿ ವಸ್ತುಗಳನ್ನು ತೆರವುಗೊಳಿಸುವ ಹಾಗೂ ವಾಹನಗಳನ್ನು ಒಂದೆಡೆ ನಿಲ್ಲಿಸುವ ಕಾರ್ಯವನ್ನು ಕೈಗೊಂಡರು.
    ಪಟ್ಟಣದ ಮುಖ್ಯ ಬಜಾರ್ ರಸ್ತೆಯು ನಿತ್ಯ ಸದಾ ಜನದಟ್ಟಣೆ, ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಜಿಲ್ಲೆಯ ಪ್ರಮುಖ ವ್ಯಾಪಾರಿ ಕೇಂದ್ರವಾಗಿರುವ ಪಟ್ಟಣಕ್ಕೆ ವಿವಿಧ ತಾಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಾರೆ. ಆದರೆ, ಫುಟ್‌ಪಾತ್ ತೆರವು ಮತ್ತು ಟ್ರಾಫಿಕ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಪೊಲೀಸರು ಹಾಗೂ ಅಧಿಕಾರಿಗಳು ಮುಂದಾಗಿರಲಿಲ್ಲ, ಈಗ ಪುರಸಭೆ ಮತ್ತು ಪೊಲೀಸ್ ಇಲಾಖೆ ಈ ಕಾರ್ಯಕ್ಕೆ ಮುಂದಾಗಿದ್ದು ಸೋಮವಾರದಿಂದ ಸಂಚಾರ ನಿಯಮಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ, ಬೀದಿಬದಿ ವ್ಯಾಪಾರಿಗಳಿಗೆ, ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ರಸ್ತೆ ಅಭಿವೃದ್ಧಿ ಕಾರ್ಯದಿಂದ ಫುಟ್‌ಪಾತ್ ತೆರವು, ಟ್ರಾಫಿಕ್ ಸಮಸ್ಯೆ ಪರಿಹರಿಸುವಲ್ಲಿ ವಿಳಂಬವಾಗಿತ್ತು. ಈಗ ಮುಖ್ಯ ಬಜಾರ್ ರಸ್ತೆಯ ಕಾಂಕ್ರೀಟ್ ರಸ್ತೆಯಾಗಿದೆ. ವ್ಯಾಪಾರಸ್ಥರ ಸಭೆ ಕರೆದು ಸಂಚಾರ ಸಮಸ್ಯೆಗೆ ಪರಿಹಾರ ಮಾಡಲು ವಿನಂತಿಸಿದಾಗ ಎಲ್ಲರೂ ಸಹಮತ ತೋರಿದ್ದರು. ಅದನ್ನು ಕಾರ್ಯರೂಪಕ್ಕೆ ತರಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಣದಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.
    ಪುರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಮಂಜುಳಾ ಹೂಗಾರ, ಶಿವಣ್ಣ ಮ್ಯಾಗೇರಿ, ಬಸವಣ್ಣೆಪ್ಪ ನಂದೆಣ್ಣವರ ಪೊಲೀಸ್ ಸಿಬ್ಬಂದಿ ಪೌರ ಕಾರ್ಮಿಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts