ಜೀವನದಲ್ಲಿಯೂ ರ‌್ಯಾಂಕ್ ಪಡೆದಾಗ ಕೀರ್ತಿ : ವಕೀಲರ ಸಂಘದ ಕೋಶಾಧಿಕಾರಿ ಮಹೇಶ್ ಅನಿಸಿಕೆ

New Project (3)
Published on

ಕಡಬ: ವಿದ್ಯೆಯಲ್ಲಿ ರ‌್ಯಾಂಕ್ ಪಡೆದರೆ ಸಾಕಾಗುವುದಿಲ್ಲ, ಜೀವನದಲ್ಲಿಯೂ ರ‌್ಯಾಂಕ್ ಪಡೆದಾಗ ಮಾತ್ರ ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬಹುದು. ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಪಾಲಕರ ಪಾತ್ರ ಮಹತ್ತರವಾದುದು ಎಂದು ಪುತ್ತೂರು ವಕೀಲರ ಸಂಘದ ಕೋಶಾಧಿಕಾರಿ ಮಹೇಶ್ ಕೆ.ಸವಣೂರು ಹೇಳಿದರು.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಣಿಯೂರು ಉಜ್ವಲ ಸಂಜೀವಿನಿ ಗ್ರಾಮ ಪಂಚಾಯಿತಿಮಟ್ಟದ ಒಕ್ಕೂಟದ ಸಹಕಾರದೊಂದಿಗೆ ಕಾಣಿಯೂರು ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯುವ ಮತ್ತು ಮಹಿಳಾ ಸಬಲೀಕರಣ ಹಾಗೂ ನಾಗರಿಕ ಶಿಷ್ಟಾಚಾರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಣಿಯೂರು ಉಜ್ವಲ ಸಂಜೀವಿನಿ ಗ್ರಾಮ ಪಂಚಾಯಿತಿಮಟ್ಟದ ಒಕ್ಕೂಟ ಅಧ್ಯಕ್ಷೆ ಚಂದ್ರಾವತಿ ರೈ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಗ್ರಾಪಂ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಕಾಣಿಯೂರು ಉಜ್ವಲ ಸಂಜೀವಿನಿ ಗ್ರಾಮ ಪಂಚಾಯಿತಿಮಟ್ಟದ ಒಕ್ಕೂಟದ ಉಪಾಧ್ಯಕ್ಷೆ ಚಿನ್ನಮ್ಮ ಮೊದಲಾದವರಿದ್ದರು. ತಂಡದ ನಾಯಕಿ ಅಂಕಿತಾ ಸ್ವಾಗತಿಸಿದರು. ಯೋಜನೆಯ ಮೇಲ್ವಿಚಾರಕ ಮನ್ವಿತ್ ಪ್ರಸ್ತಾವನೆಗೈದರು. ಆಕೃತಿ ನಿರೂಪಿಸಿದರು. ತೀರ್ಥನ್ ಬಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net