More

    ಮಾ.೨೮ ರಿಂದ ಕೊಡಗು ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ: ವರ್ಣಿತ್ ನೇಗಿ

    ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಕೊಡಗು ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಹೇಳಿದರು.


    ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಳಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿ.ಪಂ.ಸಿಇಒ ನಿರ್ದೇಶನ ನೀಡಿದರು.


    ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದರೆ ಕೂಡಲೇ ಸಿ-ವಿಜಿಲ್ ಆಪ್ ಮೂಲಕ ದೂರು ದಾಖಲಿಸಿ ಪ್ರಕರಣ ಇತ್ಯರ್ಥಪಡಿಸಬೇಕು. ಅಧಿಕಾರಿಗಳು ತಂಡೋಪಾದಿಯಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾ.ಪಂಇಒ ಎಲ್ಲರೂ ಒಟ್ಟುಗೂಡಿ ಮತದಾನ ಹೆಚ್ಚಳಕ್ಕೆ ಶ್ರಮಿಸಬೇಕು ಎಂದರು.


    ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ್ ಮಾತನಾಡಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


    ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ನಗರಸಭೆ ಪೌರಾಯುಕ್ತ ವಿಜಯ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್ ಇತರರು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಚಟುವಟಿಕೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.


    ಮತದಾನದ ಜಾಗೃತಿ ಅಭಿಯಾನ: ೨೦೨೪ ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸ್ವೀಪ್ ಕಾರ್ಯಕ್ರಮದಡಿ ಪುರಸಭಾ ವ್ಯಾಪ್ತಿಯಲ್ಲಿ ಮತದಾನ ಮಾಡುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರ ಪುರಸಭೆ ವತಿಯಿಂದ ಬುಧವಾರ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts