More

    ಸ್ವೀಪ್ ಸಮಿತಿಯಿಂದ ಜಾಗೃತಿ ಕಾರ್ಯಕ್ರಮ

    ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಜನರು ಮತದಾನ ಮಾಡುವ ಮೂಲಕ ಸದೃಢ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎನ್ನುವ ಸಂದೇಶದೊಂದಿಗೆ ತಾಲೂಕು ಸ್ವೀಪ್ ಸಮಿತಿ ಮಂಗಳವಾರ ಜನರಲ್ಲಿ ಜಾಗೃತಿ ಮೂಡಿಸಿತು.

    ಪಟ್ಟಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಪೌರಕಾರ್ಮಿಕರು, ಪುರಸಭೆ ಮುಖ್ಯಾಧಿಕಾರಿ, ನೌಕರರು, ಸಿಬ್ಬಂದಿ, ತಾಲೂಕು ಪಂಚಾಯಿತಿ ಇಒ ಮತ್ತು ನೌಕರರ ಭಾಗಿಯಾಗಿದ್ದರು. ಮತದಾನ ಪ್ರತಿಯೊಬ್ಬರ ಹಕ್ಕು. ಹಾಗಾಗಿ ಕಡ್ಡಾಯವಾಗಿ ಮತ ಚಲಾಯಿಸಿ ಎಂಬ ಸಂದೇಶ ಸಾರಿದರು.

    ಪಟ್ಟಣದ ಕೆ.ಆರ್.ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು. ಇನ್ನೊಂದೆಡೆ ಹೊಸದಾಗಿ ಮತ ಹಾಕುವ ಹಕ್ಕು ಪಡೆದಿರುವ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಮೂಡಿಸುವ ಸಲುವಾಗಿ ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿಗೆ ತೆರಳಿದ ಸ್ವೀಪ್ ಸಮಿತಿ, ಮತದಾನದ ಮಹತ್ವ ತಿಳಿಸಿತು.

    ತಾಲೂಕು ಪಂಚಾಯಿತಿ ಇಒ ಜಿ.ಆರ್.ಹರೀಶ್, ಸಹಾಯಕ ನಿರ್ದೇಶಕ ಗಿರೀಶ್, ಪುರಸಭಾ ಮುಖ್ಯಾಧಿಕಾರಿ ಹೇಮಂತ್, ಪರಿಸರ ಇಂಜಿನಿಯರ್ ಕಾವ್ಯಾ, ಆರೋಗ್ಯ ನಿರೀಕ್ಷಕ ರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts