

ಕುಂದಾಪುರ: ಸಮಾಜದಲ್ಲಿ ಸ್ವಾಸ್ಥೃ ಕಾಪಾಡುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮ ಅತ್ಯಂತ ಪ್ರಮುಖವಾಗಿದೆ ಎಂದು ಕಂಡ್ಲೂರು ಗ್ರಾಮಾಂತರ ಪೋಲಿಸ್ ಠಾಣೆ ನಿರೀಕ್ಷಕ ಭೀಮಾಶಂಕರ ಸಿನ್ನೂರ ಹೇಳಿದರು.
ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಘಟಕ ಮತ್ತು ಐಕ್ಯುಎಸಿ ಘಟಕ ಆಶ್ರಯದಲ್ಲಿ ಮಂಗಳವಾರ ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಘಟಕ ಸಂಯೋಜಕ ಸಂದೀಪ್ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ವಿದ್ಯಾರ್ಥಿ ಕ್ಷೇಮಪಾಲನಾ ಘಟಕ ಅಧಿಕಾರಿ ಡಾ.ರವಿಚಂದ್ರ ಸ್ವಾಗತಿಸಿದರು. ವಿದ್ಯಾರ್ಥಿನಿ ಕೀರ್ತಿಕಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ದೀಪಕ್ ಕುಮಾರ್ ವಂದಿಸಿದರು.