ವಿದ್ಯಾರ್ಥಿಗಳ ಸುರಕ್ಷತೆ, ಗೌರವಕ್ಕೆ ಧಕ್ಕೆ : ಸಂದೇಶ್ ಪಿ.ಜಿ. ಹೇಳಿಕೆ

New Project (28)
Published on

ಮೂಡುಬಿದಿರೆ: ರ‌್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ಧಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ರ‌್ಯಾಗಿಂಗ್ ತಡೆಗಟ್ಟಲು ನಿಯಮಾವಳಿ ಜಾರಿಗೊಳಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.

ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‌್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ಮೂಡುಬಿದಿರೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಂಶುಪಾಲ ಡಾ.ಕುರಿಯನ್, ಆ್ಯಂಟಿ ರ‌್ಯಾಗಿಂಗ್ ಸೆಲ್‌ನ ಸಂಯೋಜಕ ಮನು, ಎನ್‌ಎಸ್‌ಎಸ್ ಅಧಿಕಾರಿ ಸುದೀಪ್, ವೈಆರ್‌ಸಿಯ ಸುಹಾಸ್ ಶೆಟ್ಟಿ ಉಪಸ್ಥಿತರಿದ್ದರು. ಫ್ರಾನ್ಸಿಲ್ ಸ್ವಾಗತಿಸಿದರು. ಸಾಧನಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net