ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ

IMG_20250107_112304
ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನ ಶ್ರೀ ಸಿದ್ದರಾಮಯ್ಯ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್‌ನಿಂದ ಆಗುತ್ತಿರುವ ತೊಂದರೆ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಮುಖ್ಯ ಶಿಕ್ಷಕಿ ಶ್ರುತಿ, ಸಹ ಶಿಕ್ಷಕರು ಇದ್ದರು.
Published on

ಹೊಳೆನರಸೀಪುರ: ಪರಿಸರದ ಮೇಲೆ ಪ್ಲಾಸ್ಟಿಕ್‌ನಿಂದ ಆಗುತ್ತಿರುವ ಅನಾಹುತ ಮತ್ತು ಪರಿಸರ ಮಾಲಿನ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಳ್ಳಿ ಮೈಸೂರಿನ ಶ್ರೀ ಸಿದ್ದರಾಮೇಶ್ವರ ವಿದ್ಯಾ ಸಂಸ್ಥೆಯ ಮಕ್ಕಳಿಂದ ಮಂಗಳವಾರ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸುವ ಮೂಲಕ ಅರಿವು ಮೂಡಿಸಲಾಯಿತು.

ಶಾಲೆಯ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯಿಂದಾಗುವ ಮಾಲಿನ್ಯದ ಬಗ್ಗೆ ಬೀದಿನಾಟಕದ ಮೂಲಕ ಮೂಲಕ ಅರಿವು ಮೂಡಿಸಿದರು. ಪ್ಲಾಸ್ಟಿಕ್‌ನಿಂದ ಆಗುವ ತೊಂದರೆಗಳು ಮತ್ತು ಇದರಿಂದ ಪ್ರಾಣಿಗಳ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇನ್ನಿತರ ವಿಷಯಗಳನ್ನು ಜನರಿಗೆ ನಾಟಕದ ಮೂಲಕ ಮನದಟ್ಟು ಮಾಡಿದರು. ಆದಷ್ಟು ಪ್ಲಾಸ್ಟಿಕ್ ಉಪಯೋಗವನ್ನು ಮಿತಗೊಳಿಸಿ ಎಂದು ಜಾಗೃತಿ ಮೂಡಿಸಿದರು.

ಅಂಗಡಿ, ಮಾರುಕಟ್ಟೆಗೆ ಪ್ಲಾಸ್ಟಿಕ್ ಕವರ್‌ಗಳನ್ನು ಒಯ್ಯಬೇಡಿ ಎಂದು ಸಾರ್ವಜನಿಕರಿಗೆ ಪೇಪರ್ ನಿಂದ ತಯಾರಿಸಿದ ಕೈಚೀಲ ಗಳನ್ನು ವಿತರಿಸಲಾಯಿತು. ಜತೆಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಉಪಯೋಗ ಕಡಿಮೆ ಮಾಡಿಸುವಂತೆ ಮನವಿ ಸಲ್ಲಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಶ್ರುತಿ, ಸಹ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net