ಯೋಜನೆ ಸೌಲಭ್ಯಗಳ ಸದುಪಯೋಗ : ಅರಿವು ಕಾರ್ಯಾಗಾರದಲ್ಲಿ ವಾಮನ ಕೋಟ್ಯಾನ್ ಹೇಳಿಕೆ

New Project (49)
Published on

ಮೂಲ್ಕಿ: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆ ಹಾಗೂ ಸೇವೆಗಳ ಸೌಲಭ್ಯ ಒದಗಿಸುತ್ತಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ಹೇಳಿದರು.

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ದ.ಕ. ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಮೂಲ್ಕಿ ನಗರ ಪಂಚಾಯಿತಿ ಸಹಯೋಗದೊಂದಿಗೆ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ವಕೀಲ ನಿಕೇಶ್ ಶೆಟ್ಟಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲರಾದ ಅಶ್ವಿನಿ ಹಾಗೂ ಸವಿತಾ ಬಾಲ್ಯ ವಿವಾಹ ಕಾಯ್ದೆ 2006ರ ಹಿನ್ನೆಲೆ, ಕಾರಣ, ಕಾನೂನು ಕ್ರಮ ಹಾಗೂ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಮಿಷನ್ ಸಂಯೋಜಕಿ ಅನುಷ್ಕ ಸ್ವಾಗತಿಸಿದರು. ಲಿಂಗಸಂವೇದನಾ ತಜ್ಞೆ ವಿಶಾಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net