More

    ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ; ಜಿಪಂ ಸಿಇಒ ಅಕ್ಷಯ ಶ್ರೀಧರ ನೇತೃತ್ವ

    ಹಾವೇರಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ವಿವಿಧ ಶಾಲಾ-ಕಾಲೇಜು, ಹಾಸ್ಟೇಲ್‌ಗಳ ವಿದ್ಯಾರ್ಥಿಗಳಿಗೆ ಹಾಗೂ ನರೇಗಾ ಕೂಲಿ ಕಾರ್ಮಿಕರಿಗೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ನೇತೃತ್ವದಲ್ಲಿ ಗುರುವಾರ ವಿವಿಧ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
    ಈ ವೇಳೆ ಮಾತನಾಡಿದ ಸಿಇಒ ಅಕ್ಷಯ, ಜಿಲ್ಲೆಯ ವಿವಿಧ ತಾಲೂಕುಗಳ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ, ಮಕ್ಕಳಿಂದ ಪೇಂಟಿಂಗ್ ಮೂಲಕ ಜಾಗೃತಿ, ಹಾಸ್ಟೇಲ್‌ಗಳ ಪುಟ್ಟ ಮಕ್ಕಳು ತಂದೆ -ತಾಯಿಯವರಿಗೆ ಪತ್ರ ಬರೆಯುವ ಮೂಲಕ ಕಡ್ಡಾಯ ಮತದಾನ ಮತ್ತು ಯಾವುದೇ ಆಮಿಷಕ್ಕೆ ಒಳಗಾಗದೇ ಸ್ವಇಚ್ಛೆಯಿಂದ ಮತದಾನಕ್ಕೆ ಪತ್ರ ಬರೆಸಲಾಗುತ್ತಿದೆ ಎಂದರು.
    ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಗಳಲ್ಲಿ ಸಂಚರಿಸಿ ಮತದಾನದ ಕುರಿತು ಪ್ರತಿಜ್ಞಾನ ವಿಧಿ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಿವಿಪ್ಯಾಟ್ ಮತ್ತು ಇವಿಎಂ ಬಳಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನರೇಗಾ ಕೆಲಸದ ಸ್ಥಳದಲ್ಲಿ ಕೂಲಿಕಾರರಿಗೆ ಬಿಡುವಿನ ಸಮಯದಲ್ಲಿ ಪ್ರತಿಜ್ಞಾ ವಿಧಿ ಭೋದಿಸಿ, ಅರಿವು ಮೂಡಿಸಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts