More

    ವೇತನ ಆಯೋಗದ ವರದಿ ಜಾರಿಗೆ ಆಯನೂರು ಒತ್ತಾಯ

    ಶಿವಮೊಗ್ಗ: ಬರದ ನಡುವೆಯೂ ರಾಜ್ಯ ಸರ್ಕಾರಿ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಇದೀಗ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನವೇ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಒತ್ತಾಯಿಸಿದರು.

    ಹಿಂದಿನ ಸರ್ಕಾರ ಆಯೋಗ ರಚನೆ ಮಾಡಿ ಮಧ್ಯಂತರ ವೇತನವಾಗಿ ಶೇ.17ರಷ್ಟು ಹೆಚ್ಚಳ ಮಾಡಿತ್ತು. ಇದೀಗ ಮಾ.15ಕ್ಕೆ ಆಯೋಗದ ಅವಧಿ ಮುಕ್ತಾಯಗೊಳ್ಳಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈಗಾಗಲೇ ವರದಿ ಪೂರ್ಣಗೊಂಡಿದ್ದು ತಕ್ಷಣವೇ ತರಿಸಿಕೊಂಡು ಅನುಷ್ಠಾನಗೊಳಿಸಬೇಕು. ಒಮ್ಮೆ ನೀತಿ ಸಂಹಿತೆ ಜಾರಿಯಾದರೆ ಚುನಾವಣಾ ಆಯೋಗ ಅಡ್ಡಿಪಡಿಸುವ ಸಾಧ್ಯತೆ ಇದೆ. ಜತೆಗೆ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಮರು ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts