More

    ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ

    ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಎಚ್​ಪಿ(ವಿಶ್ ಹಿಂದು ಪರಿಷತ್​) ಜ.15ರಂದು ಆರಂಭಿಸಿದ ನಿಧಿ ಸಮರ್ಪಣಾ ಅಭಿಯಾನಕ್ಕೆ ಎಲ್ಲೆಡೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, ಕೋಟ್ಯಂತಹ ಹಣ ಸಂಗ್ರಹ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಇಂದು(ಫೆ.15) ಟ್ವೀಟ್ ಮೂಲಕ ಕಳವಳ ವ್ಯಕ್ತಪಡಿಸಿರುವ ಎಚ್​ಡಿಕೆ, ‘ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರ್​ಎಸ್​ಎಸ್​ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರ್​ಎಸ್​ಎಸ್​ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತೆ? ಎಂಬ ಆತಂಕ ಕಾಡುತ್ತಿದೆ’ ಎಂದಿದ್ದಾರೆ. ಇದನ್ನೂ ಓದಿರಿ ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

    ‘ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ’ ಎಂದು ಎಚ್​ಡಿಕೆ ಸರಣಿ ಟ್ವೀಟ್​ ಮಾಡಿದ್ದಾರೆ.

    ‘ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರ್​ಎಸ್​ಎಸ್​ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರ್​ಎಸ್​ಎಸ್​ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೇ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ’ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

    ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

    ಬಡವರ ಅಕ್ಕಿಗೆ ‘ಕತ್ತ’ರಿ ಹಾಕೋಕೆ ಹೋದ ಸಚಿವ ಕತ್ತಿಗೆ ಸಿಎಂ ಯಡಿಯೂರಪ್ಪ ಕ್ಲಾಸ್​

    ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts