More

    ರಾಮ ಮಂದಿರಕ್ಕೆ ಹಣ ಕೊಡದವರ ಮನೆ ಗುರುತು: ಎಚ್.​ಡಿ. ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ವಿಎಚ್​ಪಿ

    ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡಲಾಗುತ್ತಿದೆ…’ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಮಾಡಿದ್ದ ಟ್ವೀಟ್​ ವಿರುದ್ಧ ವಿಎಚ್​ಪಿ(ವಿಶ್ವ ಹಿಂದು ಪರಿಷತ್​) ಕಿಡಿಕಾರಿದೆ.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಮ್ಮಿಕೊಂಡಿರುವ ನಿಧಿ ಸಮರ್ಪಣಾ ಅಭಿಯಾನದ ನೇತೃತ್ವ ವಹಿಸಿರುವ ವಿಶ್ವ ಹಿಂದು ಪರಿಷತ್ತು, ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ಬಾಲಿಶ ಹಾಗೂ ಬೇಜವಾಬ್ದಾರಿಯಿಂದ ಕೂಡಿದೆ ಟೀಕಿಸಿದೆ. ಕುಮಾರಸ್ವಾಮಿ ಸಣ್ಣ ಮಟ್ಟಿಗೆ ಆಲೋಚನೆ ಮಾಡ್ತಾರೆ ಅಂತಾ ಅನಿಸಿರಲಿಲ್ಲ. ಜನ ಸ್ವಯಂಪ್ರೇರಿತವಾಗಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ನಿವ್ಯಾಕೆ ಮನಸ್ಸಿಗೆ ಮೊಳೆಹೊಡೆಯುವ ಕೆಲಸ ಮಾಡ್ತೀದ್ದೀರಿ? ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ. ರವಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿರಿ ದರ್ಶನ್​ ಬರ್ತ್​​ಡೇಗೆ ರಾಬರ್ಟ್ ಟ್ರೇಲರ್​; ಸೆನ್ಸೆಷನ್ ಸೃಷ್ಟಿಸಿದ ಮಾಸ್​ ಅಲ್ಲ ಬಾಸ್​ ಡೈಲಾಗ್​

    ರಾಮ ಮಂದಿರಕ್ಕೆ ಹಣ ಕೊಡದವರ ಮನೆ ಗುರುತು: ಎಚ್.​ಡಿ. ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ವಿಎಚ್​ಪಿರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ವಿವಾದಿತ ಟ್ವೀಟ್​ ಮಾಡಿದ್ದ ಎಚ್​ಡಿಕೆ ವಿರುದ್ಧ ಹಲವರು ಅಸಮಾಧಾನ ಹೊರಹಾಕಿದ್ದಾರೆ. ಸಮಾಜವು ಧನಾತ್ಮಕವಾಗಿ ನಿಧಿ ಸಮರ್ಪಣೆಯಲ್ಲಿ ತೊಡಗಿದೆ. ಸ್ವ ಇಚ್ಛೆಯಿಂದ ಜನರು ನೀಡುವ ದೇಣಿಗೆಗೆ ಕುಮಾರಸ್ವಾಮಿ ಅವಮಾನಿಸಿದ್ದಾರೆ. ಅವರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ವಿಹಿಂಪ ನ ಕರ್ನಾಟಕ ರಾಜ್ಯದ ಸಂಘಟನಾ ಕಾರ್ಯದರ್ಶಿ ಬಸವರಾಜು ಆಗ್ರಹಿಸಿದ್ದಾರೆ.

    ಕಾರವಾರದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ರಾಮಮಂದಿರಕ್ಕೆ ಹಣ ಕೊಡದವರ ಮನೆಯನ್ನು ಗುರುತು ಮಾಡುತ್ತಿದ್ದಾರೆ ಎನ್ನುವುದು ಸುಳ್ಳು. ರಾಜಕೀಯ ಪ್ರೇರಿತ ಹೇಳಿಕೆಯನ್ನ ಕುಮಾರಸ್ವಾಮಿ ನೀಡಿದ್ದಾರೆ. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ರಾಜಕೀಯ ಬೇಡ. ನಮ್ಮ ಸರ್ಕಾರದಲ್ಲಿ ಹಿಟ್ಲರ್ ಆಡಳಿತ ಇಲ್ಲಿಯವರೆಗೂ ಬಂದಿಲ್ಲ, ಮುಂದೆಯೂ ಬರುವುದಿಲ್ಲ. ಅವರ ಪಕ್ಷದ ಶಾಸಕರು, ಅಲ್ಪಸಂಖ್ಯಾತರು ಮಂದಿರ ನಿರ್ಮಾಣಕ್ಕೆ ಹಣ ಕೊಟ್ಟಿದ್ದಾರೆ. ಕುಮಾರಸ್ವಾಮಿ ಕೂಡ ಮುಂದೆ ಹಣ‌ ಕೊಡಬಹುದು ಎಂದಿದ್ದಾರೆ.

    ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸೋಮವಾರ ಟ್ವಿಟ್​ ಮೂಲಕ ಆತಂಕ ವ್ಯಕ್ತಪಡಿಸಿದ್ದರು.

    ‘ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರ್​ಎಸ್​ಎಸ್​ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರ್​ಎಸ್​ಎಸ್​ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತೆ? ಎಂಬ ಆತಂಕ ಕಾಡುತ್ತಿದೆ. ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ’ ಎಂದು ಎಚ್​ಡಿಕೆ ಸರಣಿ ಟ್ವೀಟ್​ ಮಾಡಿದ್ದರು.

    ಸುಂದರಿ ಮೋಹಕ್ಕೆ ಸಿಲುಕಿದ್ದ ಗಂಡನಿಂದಲೇ ಗರ್ಭಿಣಿ ಕೊಲೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

    ಗ್ರಾಪಂ ಸದಸ್ಯೆ ಮಗನ ಕಗ್ಗೊಲೆ: ಮನೆ ಬಾಗಿಲಿಗೆ ಬಂದ ಸೋತ ಅಭ್ಯರ್ಥಿ ಗುಂಪಿನಿಂದಲೇ ಕೃತ್ಯ

    ನಾಯಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಮೈಸೂರಲ್ಲಿ ಕಾಮುಕನ ಪೈಶಾಚಿಕ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts