More

    ಕವನ ಬರೆದು ಶ್ರೀರಾಮನನ್ನು ಸ್ಮರಿಸಿದ ಕಿಚ್ಚ ಸುದೀಪ್​

    ಬೆಂಗಳೂರು: ಇಡೀ ದೇಶ ರಾಮನ ಸ್ಮರಣೆ ಮಾಡುತ್ತಿದೆ. ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ನಟ ಕಿಚ್ಚ ಸುದೀಪ್ ಅವರು ಶ್ರೀರಾಮನ ಸ್ಮರಣೆ ಮಾಡಿದ್ದಾರೆ. ರಾಮನಿಗೆ ದೀಪ ಬೆಳಗುವ ವಿಡಿಯೋ ಒಂದನ್ನು ಶೇರ್ ಮಾಡಿದ್ದರು. ಇದೀಗ ಇನ್ನೊಂದು ಪೋಸ್ಟ್ ಮಾಡಿದ್ದಾರೆ.

    ಇದನ್ನೂ ಓದಿ:ಜಿಲ್ಲೆಯಾದ್ಯಂತ ಅಯೋಧ್ಯಾ ರಾಮ ನಾಮ ಜಪ

    ಕವನ ಬರೆದು ಶ್ರೀರಾಮನನ್ನು ಸ್ಮರಿಸಿದ ಕಿಚ್ಚ ಸುದೀಪ್​

    ಕಿಚ್ಚ ಸುದೀಪ ಕವನ ಹೀಗಿದೆ: ರಾಮ ಜಯ ರಾಮ ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ, ನಿನ್ನ ಕಣ್ಣುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ? ನಿನ್ನ ಕೀರ್ತನೆಗೆ ಎರಡೇ ಕಿವಿಗಳು, ನಮ್ಮದು ಎಂತಹ ಪುಣ್ಯ ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ..

    ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ, ಅರುಣ್ ಯೋಗಿರಾಜ್ ಅವರಿಗೆ ನಿನ್ನ ಕೆತ್ತಲು ಕಲಾಶಿರ್ವಾದವಾದೆ. ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮಾನ ಇದು ಕರ್ನಾಟಕಕ್ಕೆ ನಿಜದ ಸಮ್ಮಾನ, ಜೈ ಶ್ರೀರಾಮ್ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಶ್ರೀರಾಮನ ಸ್ಮರಣೆಯನ್ನ ಎಲ್ಲರೂ ಮಾಡುತ್ತಿದ್ದಾರೆ. ಅದೇ ರೀತಿ ಕಿಚ್ಚ ಸುದೀಪ್ ಕೂಡ ರಾಮ ಸ್ಮರಣೆ ಮಾಡಿದ್ದಾರೆ. ಬಾಲ ರಾಮನ ಮುಂದೆ ಹೂಗಳನ್ನ ಇಟ್ಟು ಪೂಜೆ ಸಲ್ಲಿಸಿದ್ದಾರೆ. ದೀಪ ಬೆಳಗಿಸಿ ತಮ್ಮ ರಾಮ ಭಕ್ತಿಯನ್ನು ಕಿಚ್ಚ ಸುದೀಪ್ ವ್ಯಕ್ತಪಡಿಸಿದ್ದಾರೆ.

    500 ವರ್ಷಗಳ ಕತ್ತಲೆಯ ನಂತರ ಒಂದು ರಾಷ್ಟ್ರದ, ಜನರ, ಬೆಳಕಿನ ಪ್ರಾಣ-ಪ್ರತಿಷ್ಠೆ, ಜೈ ಶ್ರೀರಾಮ್ ಎಂದು ಕಿಚ್ಚ ಸುದೀಪ್​ ಬರೆದುಕೊಂಡಿದ್ದಾರೆ. ಆ ಒಂದು ವಿಡಿಯೋವನ್ನ ತಮ್ಮ ಎಕ್ಸ್​ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

    ಕಿಚ್ಚ ಸುದೀಪ್ ಮನೆಯಲ್ಲಿ ರಾಮನ ಆರಾಧನೆ ಅದ್ಧೂರಿಯಾಗಿ ಆಚರಿಸಿದ್ದಾರೆ. ಬಾಲ ರಾಮನ ಮೂರ್ತಿಗೆಯ ಫೋಟೋಗೆ ಪೂಜೆ ಸಲ್ಲಿಸಿದ್ದಾರೆ. ಶ್ರಿರಾಮನ ಫೋಟೋ ಮುಂದೆ ವಿಶೇಷವಾಗಿ ದೀಪ ಹಚ್ಚಿದ್ದಾರೆ. ಶ್ರೀ ರಾಮ ರಘು ರಾಮ ನಮ್ಮ ಬಾಳಿನಲ್ಲಿ ಎಷ್ಟು ಮುಖ್ಯ ಅನ್ನೋದನ್ನ ಕೂಡ ಅಷ್ಟೇ ಸೂಕ್ತ ಸಾಲುಗಳಲ್ಲಿಯೇ ತಿಳಿಸಿದ್ದಾರೆ. ಈ ಮೂಲಕ ತಮ್ಮ ರಾಮ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ.

    ಪ್ರಭಾಸ್ ‘ಕಲ್ಕಿ 2898 AD’ ಚಿತ್ರದಲ್ಲಿ ನಟಿಸಲಿದ್ದಾರೆ ಮಲಯಾಳಂ ಸ್ಟಾರ್ ನಟಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts