More

    ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ ಜಾಗ

    ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ಸಾಯಂಕಾಲ ಲಕ್ನೋದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ಉಭಯ ಕುಶಲೋಪರಿ ಮಾತುಕತೆ ನಡೆಸಿದರು.
    ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸಕ್ಕೆ ಜಾಗ ಮಂಜೂರು ಮಾಡುವಂತೆ ಪತ್ರ ಬರೆದಿರುವುದನ್ನು ಪ್ರಸ್ತಾವಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥ್, ಅನೇಕ ರಾಜ್ಯಗಳು ಅಯೋಧ್ಯೆಯಲ್ಲಿ ಯಾತ್ರಿಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಕೋರಿಕೆ ಸಲ್ಲಿಸಿದ್ದು, ಶೀಘ್ರದಲ್ಲಿ ನಿವೇಶನಗಳನ್ನು ಗುರುತಿಸಲಾಗುವುದು ಎಂದು ಭರವಸೆ ನೀಡಿದರು.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ ಹಾಗೂ ಕೋವಿಡ್ ನಿಯಂತ್ರಣದ ಬಗ್ಗೆ ಶ್ರೀಗಳು ಶ್ಲಾಘನೆ ವ್ಯಕ್ತಪಡಿಸಿದರು.
    ಶ್ರೀಗಳ ಆಪ್ತ ಸಹಾಯಕ ಕೃಷ್ಣಮೂರ್ತಿ ಭಟ್, ಕಾರ್ಯದರ್ಶಿ ವಿಷ್ಣು ಭಟ್ ಜತೆಗಿದ್ದರು.

    ನೀಲಾವರ ಗೋಶಾಲೆಗೆ ಆಹ್ವಾನ
    ಉಡುಪಿ ಶ್ರೀಕೃಷ್ಣ ಮಠಕ್ಕೆ ಹಾಗೂ ನೀಲಾವರ ಗೋಶಾಲೆಗೆ ಆಗಮಿಸುವಂತೆ ಪೇಜಾವರ ಶ್ರೀಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಿದರು. ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಜತೆಗಿನ ಒಡನಾಟವನ್ನು ಯೋಗಿ ಸ್ಮರಿಸಿದರು. ಬೆಂಗಳೂರು ವಿದ್ಯಾಪೀಠ ಆವರಣದಲ್ಲಿ ವೃಂದಾವನ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇಲ್ಲಿಗೆ ಆಗಮಿಸಿ ದರ್ಶನ ಪಡೆಯುವಂತೆ ಪೇಜಾವರ ಶ್ರೀಗಳು ಯೋಗಿ ಅವರನ್ನು ಆಮಂತ್ರಿಸಿದರು.

    ರಾಮಲಲ್ಲಾನಿಗೆ ಚಾಮರ ಸೇವೆ: ಪೇಜಾವರ ಶ್ರೀಗಳು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದು ಚಾಮರ ಸೇವೆ ಸಲ್ಲಿಸಿದರು. ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ನಿರ್ಮಾಣ ಕಾಮಗಾರಿ ವೀಕ್ಷಿಸಿ, ಮೇಲ್ವಿಚಾರಕರಿಂದ ಮಾಹಿತಿ ಪಡೆದರು. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಭೇಟಿ ನೀಡಿದರು. ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್‌ಜಿ, ಅಯೋಧ್ಯ ಮಣಿ ರಾಮಚಾವಣಿ ಮತ್ತು ಉತ್ತಾರಾಧಿಕಾರಿ ಕಮಲ ನಯನ ದಾಸ್ ಅವರನ್ನು ಭೇಟಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts