

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹಾಗೂ ಹುಬ್ಬಳ್ಳಿಯ ಆಯುಷ್ ಫೆಡರೇಶನ್ ಆಫ್ ಇಂಡಿಯಾ (ಎಎಫ್ಐ) ಘಟಕ ಮತ್ತು ಇಲ್ಲಿಯ ಸಂಜೀವಿನಿ ಆಯುರ್ವೇದ ವೈದ್ಯಕಿಯ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಸಂಜೀವಿನಿ ಆಯುರ್ವೇದ ವೈದ್ಯಕಿಯ ಕಾಲೇಜಿನಲ್ಲಿ ವೈದ್ಯಕಿಯ ಸಸ್ಯಗಳ ವನ ಮಹೋತ್ಸವ ಆಚರಿಸಲಾಯಿತು.
ಅತಿಥಿಯಾಗಿದ್ದ ಧಾರವಾಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ ಮಾತನಾಡಿ, ಕೆಪಿಎಂಇ ನಿಯಮಗಳ ಪಾಲನೆ ಮತ್ತು ಅವುಗಳ ಸಮಗ್ರ ಮಾಹಿತಿಯನ್ನು ನೀಡಿದರು. ಅಗ್ನಿ ಶಾಮಕ ಪ್ರಮಾಣ ಪತ್ರ ಪಡೆಯುವ ಅಗತ್ಯವನ್ನು ತಿಳಿಸಿದರು.
ಎಎಫ್ಐ ಸಲಹಾ ಸಮಿತಿ ಅಧ್ಯಕ್ಷ ಮತ್ತು ಸಂಜೀವಿನಿ ಆಯುರ್ವೇದ ವೈದ್ಯಕಿಯ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಡಾ. ಶ್ರೀನಿವಾಸ ಬನ್ನಿಗೋಳ, ಸಂಜೀವಿನಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಸಿ.ಸಿ. ಹಿರೇಮಠ, ಡಾ. ಪ್ರಭಾಕರ ಮಾಂಡ್ರೆ, ಡಾ. ಆನಂದ ಹುಲಮನಿ ಉಪಸ್ಥಿತರಿದ್ದರು.
ಧಾರವಾಡ ಜಿಲ್ಲೆಯ ಏಳು ತಾಲೂಕು ಮಟ್ಟದ ಪದಾಧಿಕಾರಿಗಳು, ವೈದ್ಯರು ಹಾಗೂ ಅನೇಕ ವಿದ್ಯಾರ್ಥಿಗಳು ಹಾಜರಾಗಿದ್ದರು.
ಡಾ. ಸಂದೀಪ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು, ಡಾ. ರವೀಂದ್ರ ವೈ ಸ್ವಾಗತಿಸಿದರು, ಎಎಫ್ಐ ಸಂಸ್ಥಾಪಕ ಡಾ. ಮಹಾವೀರ ಹಾವೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ. ಸೋಮಶೇಖರ ಹುದ್ದಾರ ವಂದಿಸಿದರು.