More

  ಬನ್ನಿಕುಪ್ಪೆಯಲ್ಲಿ ಆಯುರ್ವೇದ ಕಾರ್ಯಾಗಾರ

  ಬನ್ನಿಕುಪ್ಪೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೈಸೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ವತಿಯಿಂದ ಒಂದು ವಾರಗಳ ಕಾಲ ನಡೆಯುವ ಕಾರ್ಯಾಗಾರವನ್ನು ಮಂಗಳವಾರ ತಹಸೀಲ್ದಾರ್ ಡಾ. ನಯನಾ ಉದ್ಘಾಟಿಸಿದರು.

  ಪ್ರಾಂಶುಪಾಲ ಡಾ.ರಾಧಾಕೃಷ್ಣ ರಾಮರಾವ್ ಮಾತನಾಡಿ, ನಮ್ಮ ಸಂಸ್ಥೆಯಿಂದ 77 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದು, ದಿನಕ್ಕೆ ಒಂದೊಂದು ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ, ಮನೆಮದ್ದು, ಗಿಡಮೂಲಿಕೆಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ. ಪ್ರತಿ ಗ್ರಾಮಕ್ಕೂ ಆಯುರ್ವೇದ ಔಷಧದ 100 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಆಯುರ್ವೇದವು ಪಟ್ಟಣಕ್ಕೆ ಮಾತ್ರ ಸೀಮಿತವಾಗಿಲ್ಲ. ಹಳ್ಳಿಗಳಲ್ಲೂ ಚಾಲನೆಗೆ ಬರಬೇಕು ಎಂದು ತಿಳಿಸಿದರು.

  ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪ್ರಸನ್ನ, ಡಾ.ಶ್ರೀನಿವಾಸ್ ಯಾದವ್ ಹಾಗೂ ಯೋಜನಾಧಿಕಾರಿಗಳು ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts