

ಪಣಜಿ: ಕರೊನಾ ಸೋಂಕಿಗೆ ಒಳಗಾಗಿ ಹೋಂ ಐಸೋಲೇಶನ್ನಲ್ಲಿ ಇದ್ದ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿ ಶ್ರೀಪಾದ್ ನಾಯ್ಕ್ ಅವರು ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೊವಿಡ್-19 ಟೆಸ್ಟ್ ವರದಿ ಪಾಸಿಟಿವ್ ಬಂದಾಗ ಅಷ್ಟೇನೂ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ನಂತರ ಶ್ರೀಪಾದ್ ನಾಯ್ಕ್ ಅವರಿಗೆ ಜ್ವರ ಬರಲು ಶುರುವಾಯಿತು. ಹಾಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಜ್ವರ ಕಡಿಮೆ ಆಗಿದೆ ಎಂದು ಅವರ ಪುತ್ರ ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ಆನಂದ ಮಹೀಂದ್ರಾ ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಆಚರಣೆಗೂ ಮೊದಲು ಈ ವಿಡಿಯೋ ನೋಡುತ್ತಾರಂತೆ…!
ಅಷ್ಟೇ ಅಲ್ಲ, ಶ್ರೀಪಾದ್ ನಾಯ್ಕ್ ಪತ್ನಿಗೂ ಕರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್)