ಭದ್ರಾವತಿ: ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಹಳೇ ನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಹಾಗೂ ನಗರದ ಹೊಸಮನೆಯ ಆನಂದ ಸಾಮಾಜಿಕ ಸೇವಾ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಕಾರ್ಡ್ ವಿತರಿಸಿ ಹಾಗೂ 2025ನೇ ಸಾಲಿನ ಕ್ಯಾಲೆಂಡರ್ ಬಿಡಗಡೆಗೊಳಿಸಿ ಮಾತನಾಡಿದರು.
ಕರೊನಾ ನಂತರ ಜನನಕ್ಕಿಂತ ಮರಣ ಪ್ರಮಾಣ ಹೆಚ್ಚಾಗಿರುವುದು ಆತಂಕದ ಸಂಗತಿ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯ ವೆಚ್ಚಕ್ಕೆ ಕಡಿವಾಣ ಹಾಕಲು ಪ್ರಧಾನಮಂತ್ರಿ ಈ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ಸಮಾಜ ಒಂದಾದಾಗ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತವೆ. ಕಾರ್ಯಕರ್ತರು ಹಾಕಿಕೊಂಡ ರೂಪುರೇಷೆಗಳಂತೆ ನಡೆದಲ್ಲಿ ಯಶಸ್ವಿ ಕಾಣಲು ಸಾಧ್ಯ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ.ರಾಘವೇಂದ್ರ ಅವರು ಮೋದಿ ಅವರ ಈ ಯೋಜನೆಯನ್ನು ನಮ್ಮ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬಗ್ಗೆ ಕಟಿಬದ್ಧರಾಗಿದ್ದಾರೆ ಎಂದು ಹೇಳಿದರು.
ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಶೀಘ್ರ: ಬಿ.ಎಚ್.ರಸ್ತೆಯ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಯನ್ನು ಯುಗಾದಿಗೆ ಉದ್ಘಾಟನೆ ಮಾಡಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು. ಕುಟುಂಬದಲ್ಲಿ ಹಿರಿಯರ ಆರೋಗ್ಯ ಮತ್ತು ಯೋಗಕ್ಷೇಮ ನೋಡಿಕೊಳ್ಳುವುದು ಕಿರಿಯರ ಜವಾಬ್ದಾರಿ. ಆದರೆ ಇತ್ತೀಚೆಗೆ ಹಿರಿಯರನ್ನು ಕಡೆಗಣಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಕೇಂದ್ರ ಸರ್ಕಾರ ವಯೋವೃದ್ಧರನ್ನೂ ಪರಿಗಣಿಸಿ ಅವರ ಆರೋಗ್ಯದ ಚಿಂತೆನೆ ನಡೆಸಿ ಜಾರಿಗೆ ತಂದಿರುವ ಯೋಜನೆಗಳು ಸಂಪೂರ್ಣ ಅನುಷ್ಠಾನ ಆಗಲು ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ದೂರಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ.ಆನಂದಕುಮಾರ್, ಚನ್ನೇಶ್, ದುಗ್ಗೇಶ್, ಅಣ್ಣಪ್ಪ, ಬಿ.ಜಿ.ರಾಮಲಿಂಗಯ್ಯ, ಸಿಮೆಂಟ್ ಮಂಜುನಾಥ್, ಮಧುಕರ್ ಕಾನಿಟ್ಕರ್, ದಿನೇಶ್, ಕೆ.ಎಚ್.ತೀರ್ಥಯ್ಯ, ನಗರಸಭಾ ಸದಸ್ಯೆ ಅನುಪಮಾ ಚನ್ನೇಶ್ ಇತರರಿದ್ದರು.
ಆಯುಷ್ಮಾನ್ ಭಾರತ್‌ನಿಂದ ತಗ್ಗಿದೆ ಆಸ್ಪತ್ರೆ ವೆಚ್ಚ

You Might Also Like
ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango
mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…
ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ.. Akshaya Tritiya
Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ. ಚಿನ್ನದ ಅಂಗಡಿಗಳು ವ್ಯಾಪಾರದಿಂದ…
ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice
Sugarcane Juice: ಕಬ್ಬಿನ ಜ್ಯೂಸ್ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…