More

  ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ

  ನವದೆಹಲಿ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 2024ರ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಅವರು ಈ ಅಂಶವನ್ನು ಪ್ರಸ್ತಾಪಿಸಿದರು.
  ಕೇಂದ್ರ ಬಜೆಟ್​ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದಾರೆ.

  ಇದನ್ನೂ ಓದಿ:ರಿಲಯನ್ಸ್ ಮತ್ತೆ ನಂ.1: ಈ ಪಟ್ಟಿಯಲ್ಲಿ 3 ಅದಾನಿ ಕಂಪನಿಗಳು ಹೊರಬಿದ್ದಿವೆ!

  ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ-ಜನ ಆರೋಗ್ಯ ಯೋಜನೆ ವಿಶ್ವದ ಅತಿದೊಡ್ಡ ಸಾರ್ವಜನಿಕ ಅನುದಾನಿತ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದು ದ್ವಿತೀಯ ಮತ್ತು ತೃತೀಯ ಹಂತದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಲು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ. ವಿಮೆ ನೀಡುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳ 55 ಕೋಟಿ ಜನರು ಈ ಯೋಜನೆಗೆ ಒಳಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

  ಈ ಯೋಜನೆಯು 30.6 ಕೋಟಿ ಬಡ ಮತ್ತು ದುರ್ಬಲ ಕುಟುಂಬಗಳನ್ನು ಒಳಗೊಂಡಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆಯು 2018 ರಲ್ಲಿ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 6.2 ಕೋಟಿ ಆಸ್ಪತ್ರೆ ದಾಖಲಾತಿಗಳಿಗೆ ಯಶಸ್ವಿಯಾಗಿ ವಿಮಾ ಸೌಲಭ್ಯ ನೀಡಿದೆ.

  ಎಬಿ-ಪಿಎಂಜೆಎವೈ ಯೋಜನೆ ಸಂಪೂರ್ಣವಾಗಿ ನಗದುರಹಿತ ಮತ್ತು ಕಾಗದರಹಿತವಾಗಿದೆ. ಫಲಾನುಭವಿಗಳು ನಿಗದಿತ ಪ್ಯಾಕೇಜ್ ಗಳ ಅಡಿಯಲ್ಲಿ ಚಿಕಿತ್ಸೆ ಪಡೆಯಬಹುದು. ಎಂಪಾನೆಲ್ ಮಾಡಲಾದ ಆರೋಗ್ಯ ಸಂಸ್ಥೆಗಳಿಗೆ ಪ್ರಮಾಣೀಕೃತ ದರಗಳೊಂದಿಗೆ ನಿರ್ದಿಷ್ಟ ಆರೋಗ್ಯ ಪ್ಯಾಕೇಜ್​ಗಳ ಆಧಾರದ ಮೇಲೆ ಪಾವತಿಸಲಾಗುತ್ತದೆ.

  ಇದು ಕೇಂದ್ರ ಸರ್ಕಾರದ ಮಹತ್ವದ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆ. ಕಡಿಮೆ ಆದಾಯ ಹೊಂದಿರುವ ಜನರಿಗೆ ಉಚಿತ ಆರೋಗ್ಯ ವಿಮೆ ಸೌಲಭ್ಯವನ್ನು ಇದು ಒದಗಿಸುತ್ತದೆ. ಅಂದಾಜು ದೇಶದ ಸುಮಾರು ಅರ್ಧದಷ್ಟು (ಶೇ.50) ಜನರು ಈ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತಾರೆ. ಈ ಮೂಲಕ ಜನರಿಗೆ ಪ್ರಾಥಮಿಕ ಆರೋಗ್ಯ ಪ್ರಯೋಜನಗಳು ಲಭ್ಯವಾಗುತ್ತಿವೆ.

  ಈ ಕಾರ್ಯಕ್ರಮವು ರಾಷ್ಟ್ರೀಯ ವಿಮಾ ನೀತಿಯ ಭಾಗವಾಗಿದೆ. 2018ರಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಜಾರಿಗೆ ತಂದಿದೆ.

   

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts