ದಾವಣಗೆರೆ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ 2020-21ನೇ ಸಾಲಿನಲ್ಲಿ ತಲಾ 10 ಕೃಷಿ ಹೊಂಡಗಳು ಹಾಗೂ ಕನಿಷ್ಠ 20 ಎಕರೆ ಪ್ರದೇಶದಲ್ಲಿ ಬದು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಆನಂದ ತಿಳಿಸಿದ್ದಾರೆ.
ದಾವಣಗೆರೆ ತಾಲೂಕು ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕ್ಷೇತ್ರ ಬದು ನಿರ್ಮಾಣ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿ ಮಾತನಾಡಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಜಿಲ್ಲೆಯ 196 ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ , ಕೆರೆ ಹೂಳೆತ್ತುವ ಕಾಮಗಾರಿ, ಅರಣ್ಯ ಇಲಾಖೆಯ ನೆಡುತೋಪು ನಿರ್ಮಾಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
2 ಲಕ್ಷ ರೂ. ಮಿತಿಯಲ್ಲಿ ತೋಟಗಾರಿಕೆ, ರೇಷ್ಮೆ ಇಲಾಖೆಯಿಂದ ಅರ್ಹ ರೈತರಿಗೆ ಪ್ರದೇಶ ವಿಸ್ತರಣೆಯ ವೈಯಕ್ತಿಕ ಕಾಮಗಾರಿಗಳನ್ನೂ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಒಂದೂವರೆ ತಿಂಗಳಿಂದ ಲಾಕ್‌ಡೌನ್ ಜಾರಿಯಲ್ಲಿದ್ದ ಕಾರಣ ಕೂಲಿಕಾರ್ಮಿಕರು ಅತಂತ್ರರಾಗಿದ್ದರು. ಸರ್ಕಾರದ ಸೂಚನೆ ಮೇರೆಗೆ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲಾಗಿದೆ.
ಜಿಲ್ಲೆಯ ಯಾವುದೇ ಭಾಗದಿಂದ ಬೇಡಿಕೆ ಬಂದರೂ ಗ್ರಾಮಿಣ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲಾಗುವುದು. ಎಲ್ಲೆಲ್ಲಿ ಕೆಲಸ ಶುರು ಮಾಡಬಹುದು ಎಂಬುದನ್ನು ಪಟ್ಟಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಉದ್ಯೋಗ ಖಾತ್ರಿಯಡಿ ಶೇ. 90 ರಷ್ಟು ಭಾಗ ಕೂಲಿಕಾರರನ್ನೇ ಬಳಸಿಕೊಳ್ಳಲಾಗುತ್ತಿದೆ. ಯಂತ್ರಗಳ ಬಳಕೆ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ 10 ಕೃಷಿ ಹೊಂಡಗಳ ನಿರ್ಮಾಣ
ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ
ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…
Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….
ಬೆಂಗಳೂರು: ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…
Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…
ಬೆಂಗಳೂರು: ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…