25.5 C
Bangalore
Monday, December 16, 2019

ಬಿ.ಸಿ.ರೋಡ್ ರೈಲು ನಿಲ್ದಾಣ ಅವ್ಯವಸ್ಥೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

<<ಅಲೆಮಾರಿಗಳು, ಬೀದಿನಾಯಿಗಳ ವಿಶ್ರಾಂತಿ ತಾಣವಾದ ಪ್ಲಾಟ್‌ಫಾರಂ>>

- Advertisement -

ಸಂದೀಪ್ ಸಾಲ್ಯಾನ್ ಬಂಟ್ವಾಳ
ಪ್ರಯಾಣಿಕರ ತಂಗುದಾಣದಲ್ಲಿ ನಿದ್ರೆಗೆ ಜಾರಿರುವ ಬೀದಿನಾಯಿಗಳು, ಪ್ಲಾಟ್‌ಫಾರಂನಲ್ಲಿರುವ ಸಿಮೆಂಟ್ ಬೆಂಚುಗಳಲ್ಲಿ ಗೊರಕೆ ಹೊಡೆಯುತ್ತಿರುವ ಅಲೆಮಾರಿಗಳು… ಹೀಗೆ ಮನುಷ್ಯ, ಪ್ರಾಣಿಗಳು ಯಾರಿಗೂ ಅಂಜದೆ ಸುಖ ನಿದ್ರೆ ಮಾಡುತ್ತಿರುವ ಈ ಸ್ಥಳ ಬಿ.ಸಿ.ರೋಡ್ ರೈಲ್ವೆ ನಿಲ್ದಾಣ.
ಈ ರೈಲು ನಿಲ್ದಾಣ ಪ್ರಯಾಣಿಕರಿಗಿಂತಲೂ ಹೆಚ್ಚಾಗಿ ಅಲೆಮಾರಿಗಳ ಅಡ್ಡೆಯಾಗಿದೆ. ರೈಲ್ವೆ ಪ್ಲಾಟ್‌ಫಾರಂ ಎನ್ನುವುದು ವಿಶ್ರಾಂತಿ ಕೊಠಡಿಯಂತಾಗಿದೆ. ಪ್ರಯಾಣಿಕರು ಕೂರುವ ಜಾಗದಲ್ಲಿ ಅಲೆಮಾರಿಗಳು, ಬೀದಿನಾಯಿಗಳು ಬಿದ್ದುಕೊಂಡರೂ ಹೇಳುವವರಿಲ್ಲ, ಕೇಳುವವರಿಲ್ಲ. ಇದು ಶುಕ್ರವಾರ ಸಾಯಂಕಾಲ 3.30ರ ವೇಳೆಗೆ ಕಂಡುಬಂದ ದೃಶ್ಯ.
ಬಿ.ಸಿ.ರೋಡ್ ರೈಲು ನಿಲ್ದಾಣ, ರೈಲ್ವೆ ಇಲಾಖೆಯ ಆದರ್ಶ ನಿಲ್ದಾಣವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹೊರಭಾಗದಲ್ಲಿ ಸುಂದರ ಹೂವಿನ ಉದ್ಯಾನ ನಿರ್ಮಿಸಲಾಗಿದೆ. ಶೌಚಗೃಹ, ಕುಡಿಯುವ ನೀರು, ಮೊಬೈಲ್ ಚಾರ್ಜಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ರೈಲು ಹಳಿಯ ಇನ್ನೊಂದು ಭಾಗದಲ್ಲಿ ಪ್ಲಾಟ್‌ಫಾರಂ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಬಿ.ಸಿ.ರೋಡ್ ರೈಲು ನಿಲ್ದಾಣ ಪ್ರಗತಿಯತ್ತ ಸಾಗುತ್ತಿದ್ದರೂ ಇದಕ್ಕೆಲ್ಲ ಕಪ್ಪುಚುಕ್ಕೆ ಎಂಬಂತೆ ಪ್ಲಾಟ್‌ಫಾರಂನ ಆಸನಗಳು ಪ್ರಯಾಣಿಕರಿಗಾಗಿ ಮೀಸಲಿರುವ ಬದಲು ಅಲೆಮಾರಿಗಳು, ಭಿಕ್ಷುಕರು, ಗಾಂಜಾ ವ್ಯಸನಿಗಳು ಸೇರಿದಂತೆ ಮಧ್ಯಾಹ್ನ ನಿದ್ರಿಸುವವರಿಗೆಲ್ಲ ವಿಶ್ರಾಂತಿ ತಾಣವಾಗಿ ಮಾರ್ಪಾಡಾಗಿದೆ.

ಕನ್ನಡ ದೂರ ದೂರ: ರೈಲು ನಿಲ್ದಾಣದಲ್ಲಿ ಕನ್ನಡ ಭಾಷೆ ದೂರವಾಗುತ್ತಿದೆ. ಬಂಟವಾಳ ಎಂಬ ದೊಡ್ಡ ಬೋರ್ಡೊಂದು ಕನ್ನಡದಲ್ಲಿದ್ದರೆ ಉಳಿದೆಡೆ ಕನ್ನಡದ ಜಾಗವನ್ನು ಹಿಂದಿ, ಇಂಗ್ಲಿಷ್ ಆಕ್ರಮಿಸಿಕೊಳ್ಳಲಾರಂಭಿಸಿವೆ. ಕಸದ ಬುಟ್ಟಿಗಳಲ್ಲೂ ಕೂಡ ಸೂಖಾ ಕಚರಾ ಹಾಗೂ ಗೀಲಾ ಕಚರಾ ಎಂದು ಹಿಂದಿಯಲ್ಲಷ್ಟೇ ಬರೆಯಲಾಗಿದೆ. ಹಿಂದಿ, ಇಂಗ್ಲಿಷ್ ತಿಳಿಯದವರು ಕಸದ ಬುಟ್ಟಿಯ ಮುಂದೆ ಯಾವ ಕಸ ಎಲ್ಲಿ ಹಾಕಬೇಕೆಂಬ ಗೊಂದಲಕ್ಕೀಡಾಗುವುದು ಸಾಮಾನ್ಯ. ಈಗಾಗಲೇ ಮಂಗಳೂರು ಮತ್ತಿತರ ರೈಲು ನಿಲ್ದಾಣಗಳು ಪರಿಭಾಷಿಕರ ಆಕ್ರಮಣಕ್ಕೊಳಗಾದಂತೆ ಭಾಸವಾಗುತ್ತಿದ್ದು, ಬಿ.ಸಿ.ರೋಡ್ ರೈಲು ನಿಲ್ದಾಣವೂ ಅದೇ ದಿಕ್ಕಿನಲ್ಲಿ ಸಾಗುತ್ತಿದೆ.

ವಾಕಿಂಗ್ ನಿಷೇಧ:  ರೈಲು ನಿಲ್ದಾಣ ಪರಿಸರದ ಹಿರಿಯ ನಾಗರಿಕರು ಈ ಹಿಂದೆ ಸಾಯಂಕಾಲ ವೇಳೆ ಕೆಲ ಹೊತ್ತು ರೈಲು ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ರೈಲು ಪ್ಲಾಟ್‌ಫಾರಂ ಮೇಲೆ ವಾಕಿಂಗ್ ಮಾಡಿ ರಿಲಾಕ್ಸ್ ಪಡೆಯುತ್ತಿದ್ದರು. ಈ ದೃಶ್ಯ ರೈಲ್ವೆ ಅಧಿಕಾರಿಗಳ ಕೆಂಗಣ್ಣಿಗೆ ಬಿದ್ದ ಬಳಿಕ ರೈಲು ನಿಲ್ದಾಣದೊಳಗೆ ಪ್ರಯಾಣಿಕರನ್ನು ಹೊರತುಪಡಿಸಿ ಬೇರಾರೂ ಪ್ರವೇಶಿಸಬಾರದು, ರೈಲು ಪ್ಲಾಟ್‌ಫಾರಂ ಮೇಲೆ ವಾಕಿಂಗ್ ಮಾಡಬಾರದು ಎಂಬ ಫರ್ಮಾನು ಹೊರಡಿಸಲಾಯಿತು. ಈಗ ಹಿರಿಯ ನಾಗರಿಕರಾರೂ ಇತ್ತ ಸುಳಿಯುವುದಿಲ್ಲ. ಆದರೆ ಪ್ರಯಾಣಿಕರಿಗೆ ತೊಂದರೆ ನೀಡುವಂತೆ ಅಲೆಮಾರಿಗಳು, ಭಿಕ್ಷಕರು, ಗಾಂಜಾ ವ್ಯಸನಿಗಳು ರೈಲು ನಿಲ್ದಾಣದ ಆಸನಗಳನ್ನು ನಿದ್ರಿಸಲು ಆಕ್ರಮಿಸಿಕೊಂಡರೂ ರೈಲ್ವೆ ಅಧಿಕಾರಿಗಳು ಮೌನವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಿಂದೆ ಹಿರಿಯ ನಾಗರಿಕರು ಸ್ವಲ್ಪ ಹೊತ್ತು ವಾಕಿಂಗ್ ಮಾಡುತ್ತಿದ್ದೆವು. ಅದನ್ನು ಈಗ ನಿಲ್ಲಿಸಿದ್ದಾರೆ. ಈಗ ಅದೇ ಸ್ಥಳದಲ್ಲಿ ಭಿಕ್ಷುಕರು, ಅಲೆಮಾರಿಗಳು, ಗಾಂಜಾ ವ್ಯಸನಿಗಳು ಮಲಗಿಕೊಂಡರು ಯಾರೂ ಮಾತನಾಡುವುದಿಲ್ಲ.
ಬಿ.ತಮ್ಮಯ್ಯ, ಸ್ಥಳೀಯ ಹಿರಿಯ ನಾಗರಿಕರು

ಬಂಟ್ವಾಳ ರೈಲು ನಿಲ್ದಾಣ ಆದರ್ಶ ರೈಲು ನಿಲ್ದಾಣವಾಗಿ ಅಭಿವೃದ್ಧಿಯಾಗುತ್ತಿದೆ. ಎಲ್ಲ ಸೌಲಭ್ಯಗಳನ್ನು ಇಲ್ಲಿಗೆ ಒದಗಿಸಲಾಗಿದೆ. ಬಂಟ್ವಾಳ ರೈಲು ನಿಲ್ದಾಣದಲ್ಲಿ ಅಲೆಮಾರಿಗಳು, ಭಿಕ್ಷಕರು ಇರುವುದನ್ನು ರೈಲ್ವೇ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇಲ್ಲಿ ಪೊಲೀಸ್ ವ್ಯವಸ್ಥೆ ಇಲ್ಲದಿರುವುದರಿಂದ ಇಂತಹ ಸ್ಥಿತಿ ನಿರ್ಮಾಣಗೊಂಡಿದೆ.
ಸುದರ್ಶನ ಪುತ್ತೂರು, ಅಧ್ಯಕ್ಷ, ಸುಬ್ರಹ್ಮಣ್ಯ- ಮಂಗಳೂರು ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...