More

    ಬಿ.ಇಡಿ ಕಾಲೇಜುಗಳ ವಿರುದ್ಧ ತನಿಖೆಗೆ ಆಗ್ರಹ: ಬಳ್ಳಾರಿಯಲ್ಲಿ ಎಬಿವಿಪಿ ಪದಾಧಿಕಾರಿಗಳ ಪ್ರತಿಭಟನೆ

    ಬಳ್ಳಾರಿ: ಬಿ.ಇಡಿ ಸೀಟುಗಳನ್ನು ಮಾರಾಟ ಮಾಡುತ್ತಿರುವ ವಿಎಸ್‌ಕೆ ವಿವಿ ವ್ಯಾಪ್ತಿಯ ಕಾಲೇಜುಗಳ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ರಾಯಲ್ ವೃತ್ತದಲ್ಲಿ ಎಬಿವಿಪಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

    ಮಾ.5 ರಂದು ವಿಜಯವಾಣಿ ಮುಖಪುಟದಲ್ಲಿ ‘ಮಾರಟಕ್ಕಿದೆ ಬಿ.ಇಡಿ ಕಾಲೇಜು ಸೀಟ್! ಶೀರ್ಷಿಕೆಯಡಿ ವರದಿ ಪ್ರಕಟವಾಗಿದೆ. ಅಕ್ರಮವಾಗಿ ಬಿ.ಇಡಿ ಸೀಟು ಮಾರಾಟ ಮಾಡುತ್ತಿರುವುದು ಬೇಸರದ ಸಂಗತಿ. ಬಿ.ಇಡಿ ಕೋರ್ಸ್ ಬೇಕು. ಆದರೆ ತರಗತಿಗಳಿಗೆ ಹಾಜರಾಗಲು ಇಷ್ಟವಿಲ್ಲದವರನ್ನು ಆಯ್ಕೆ ಮಾಡಿ ಅಕ್ರಮವಾಗಿ ಪ್ರಮಾಣಪತ್ರ ನೀಡಲಾಗುತ್ತಿದೆ. ಇದಕ್ಕಾಗಿ ಶುಲ್ಕ ಜತೆ ಹೆಚ್ಚುವರಿ ಹಣ ಪಡೆಯಲಾಗುತ್ತದೆ. ಅಲ್ಲದೆ ಸರ್ಕಾರಿ ಕೋಟಾದಡಿ ಸೀಟು ಪಡೆದು ಬಂದ ವಿದ್ಯಾರ್ಥಿಗಳಿಂದ ಖಾಸಗಿ ಬಿ.ಇಡಿ ಕಾಲೇಜುಗಳು ಬೇಕಾಬಿಟ್ಟಿ ದುಡ್ಡು ವಸೂಲಿ ಮಾಡುತ್ತಿರುವುದು ಖಂಡನಾರ್ಹ ಎಂದರು.

    ಒಂದು ದಿನವೂ ತರಗತಿಗೆ ಹಾಜರಾಗಿದ ಪರೀಕ್ಷೆ ಮಾತ್ರ ಬರೆದು ಬಿ.ಇಡಿ ಪದವಿ ಪ್ರಮಾಣಪತ್ರ ಪಡೆದುಕೊಳ್ಳುವವರು ಶಿಕ್ಷಣದ ಗುಣಮಟ್ಟ ಕಾಪಾಡಲು ಸಾಧ್ಯವೇ? ಇಂತಹ ಅಕ್ರಮದ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಮೇಲೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ದುರಂತ. ಸರ್ಕಾರ ತಕ್ಷಣವೇ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಪದಾಧಿಕಾರಿಗಳಾದ ನವೀನ್, ಹುಲಿಗೇಶ, ಶರಣಬಸವ, ಶ್ರೀಧರ, ಗೋವಿಂದ, ಹನುಮೇಶ್, ರಾಜಶೇಖರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts