More

    ಮಂಗಳೂರು ಸ್ಮಾರ್ಟ್ ಅಲ್ಲ, ಡಿಸಾಸ್ಟರ್ ಸಿಟಿ : ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಕ್ರೋಶ

    ಮಂಗಳೂರು: ಬೆಂಗಳೂರು ಬಳಿಕ ಅತಿ ಹೆಚ್ಚು ತೆರಿಗೆ ಕಟ್ಟುವ ಮಂಗಳೂರು ನಗರ ಸ್ಮಾರ್ಟ್ ಸಿಟಿಯ ಬದಲಿಗೆ ‘ಡಿಸಾಸ್ಟರ್ ಸಿಟಿ’ ಆಗಿದೆ. ಅಸಮರ್ಪಕ ಕಾಮಗಾರಿಗಳಿಂದ ಪ್ರತಿ ಮಳೆಗಾಲದಲ್ಲೂ ಕೃತಕ ಪ್ರವಾಹ ಉಂಟಾಗಿ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ರಾಜಕೀಯ ಬಿಟ್ಟು ಜನರ ಸಂಕಷ್ಟಕ್ಕೆ ಸ್ಪಂದಿಸುವಂತಹ ಕೆಲಸ ಮಾಡಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಭಾರಿ ಪ್ರವಾಹ, ನೈಸರ್ಗಿಕ ವಿಕೋಪಕ್ಕೆ ತುತ್ತಾದ ಜನರಿಗೆ ಪರಿಹಾರ ಒದಗಿಸದೆ ರಾಜ್ಯ ಬಿಜೆಪಿ ಸರ್ಕಾರ ‘ಸ್ಲೀಪಿಂಗ್ ಮೋಡ್’ನಲ್ಲಿದೆ. ಕರಾವಳಿ ಭಾಗದಲ್ಲಿ ವಿಪರೀತ ಮಳೆಯಿಂದಾಗಿ ಹಲವಾರು ಕಡೆ ಜನರಿಗೆ ಗಂಭೀರ ಸಮಸ್ಯೆ ಉಂಟಾಗಿದೆ. ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಮನೆಗಳು ಕುಸಿದು, ಗುಡ್ಡ ಕುಸಿದು ಜನರು ಮನೆಗಳನ್ನು ಬಿಟ್ಟು ಬೇರೆ ಕಡೆ ಆಶ್ರಯಿಸುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಹಾಯಕ್ಕೆ ಧಾವಿಸಬೇಕಿದ್ದ ಸರ್ಕಾರ ಏನನ್ನೂ ಮಾಡದೆ ನಿರ್ಲಕ್ಷೃ ವಹಿಸಿದೆ ಎಂದು ದೂರಿದರು.

    ಉಳ್ಳಾಲ ಭಾಗದಲ್ಲಿ ಕಡಲ್ಕೊರೆತ ತೀವ್ರವಾಗಿ ವ್ಯಾಪಿಸುತ್ತಿದ್ದರೂ ಇದರ ತಡೆಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಕಾಮಗಾರಿಗಳನ್ನು ಪೂರ್ತಿಗೊಳಿಸದೆ ಮತ್ತಷ್ಟು ಮನೆಗಳು ಅಪಾಯದ ಅಂಚಿಗೆ ತಲುಪಿವೆ. ತಕ್ಷಣ ಬಾಕಿ ಕಾಮಗಾರಿಗಳನ್ನು ಕೈಗೊಂಡು ಇನ್ನಷ್ಟು ಹಾನಿಯಾಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts