More

  ಅಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಇಂದು ಬಿ.ಎಲ್.ಸಂತೋಷ್ ಮರುಪ್ರಶ್ನೆ!: ವಿಷಯ ಇದು..

  ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್​ ಈಗ ಮರುಪ್ರಶ್ನೆಯೊಂದನ್ನು ಹಾಕುವ ಮೂಲಕ ನಾಳಿನ ರೋಡ್ ಶೋ ಕುರಿತಂತೆ ಆಕ್ಷೇಪ ಎತ್ತಿದ್ದಾರೆ.

  ಅಷ್ಟಕ್ಕೂ ಅವರು ಈಗ ಹೀಗೆ ಮರುಪ್ರಶ್ನೆ ಹಾಕಲು ಅಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೇ ಕಾರಣ. ಚುನಾವಣಾಪೂರ್ವದಲ್ಲಿ ಪ್ರಚಾರ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್ ಶೋ ಕೈಗೊಂಡಿದ್ದನ್ನು ಅಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು.

  ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

  “ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಮೋದಿಯವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?” ಎಂದು ಮೇ 6ರಂದು ಸಿದ್ದರಾಮಯ್ಯ ಸರಣಿ ಟ್ವೀಟ್​ಗಳ ಮೂಲಕ ಪ್ರಶ್ನೆ ಮಾಡಿದ್ದರು.

  ಈಗ ಅದೇ ಟ್ವೀಟ್​​ ಕೋಟ್ ರಿ-ಟ್ವೀಟ್ ಮಾಡಿರುವ ಸಂತೋಷ್​, ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ. “ನಮ್ಮ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಟ್ವೀಟ್ ಮಾಡಿ ಬಹಳ ದಿನಗಳೇನೂ ಆಗಿಲ್ಲ. ನಾಳೆ ಬೆಂಗಳೂರು ಹಾಗೂ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಒಂದು ಅಥವಾ ಎರಡು ದಿನ ತಡವಾದರೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವುದು ತಪ್ಪುತ್ತದೆ” ಎಂದು ಬಿ.ಎಲ್.ಸಂತೋಷ್ ಪ್ರಶ್ನೆ ಮಾಡಿದ್ದಾರೆ.

  ಹೆಲ್ಮೆಟ್​ ಧರಿಸದ ಮಹಿಳಾ ಪಿಎಸ್​ಐ; ಟ್ವೀಟ್ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲು, ದಂಡ ವಿಧಿಸಿದ ಪೊಲೀಸರು

  ಐದೂ ‘ಗ್ಯಾರಂಟಿ’ಗಳು ಗ್ಯಾರಂಟಿ ಎಂದ ಮಲ್ಲಿಕಾರ್ಜುನ ಖರ್ಗೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts