More

    ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಸಂಬಂಧ ಬಿ-ರಿಪೋರ್ಟ್ ಅಂಗೀಕೃತ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನಿರಾಳ

    ಉಡುಪಿ: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಬಿ-ರಿಪೋರ್ಟ್ ಸಲ್ಲಿಕೆ ಆಗಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರಾಳಗೊಳ್ಳುವಂತಾಗಿದೆ.

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಉಡುಪಿ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಅದನ್ನು ಅಂಗೀಕರಿಸಿದೆ.

    ಇದನ್ನೂ ಓದಿ: ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ

    ಗುತ್ತಿಗೆ ಬಿಲ್‌ ಪಾವತಿ ಸಂಬಂಧ ಕಮಿಷನ್ ಕೇಳಿದ್ದಾಗಿ ಆರೋಪ ಹೊರಿಸಲಾಗಿತ್ತು. ಆದರೆ ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಬಿ-ರಿಪೋರ್ಟನ್ನು ಅಂಗೀಕರಿಸಿದೆ.

    ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts