More

    ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಷಾ ಕಡೆ ನೋಡುತ್ತಿದೆ: ಸಿಎಂ ಬಿಎಸ್​ವೈ

    ಹುಬ್ಬಳ್ಳಿ: ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಷಾ ಕಡೆ ನೋಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದರು.

    ಪೌರತ್ವ ತಿದ್ದುಪಡಿ ಕಾಯ್ದೆ ಪರ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿರುವ ಮಹಾ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಬಿಎಸ್​ವೈ, ಪ್ರತಿಪಕ್ಷಗಳು ಪೌರತ್ವ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿವೆ. ಹೀಗಾಗಿ ಅಮಿತ್​ ಷಾ ನೇತೃತ್ವದಲ್ಲಿ ಜನಜಾಗೃತಿ ಮಾಡುತ್ತಿದ್ದೇವೆ ಎಂದರು.

    ಇನ್ನೂ ಕೇವಲ ಮೂರುವರೆ ವರ್ಷ ಮಾತ್ರ ಅಧಿಕಾರದಲ್ಲಿರುತ್ತೇವೆ. ಬಳಿಕ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಅಮಿತ್​ ಷಾ ಹಾಗೂ ಪ್ರಧಾನಿ ಮೋದಿ ಕೈ ಬಲ ಪಡಿಸಬೇಕಿದೆ. ಹುಬ್ಬಳ್ಳಿ ಹೋರಾಟದ ಭೂಮಿಯಾಗಿದೆ. ಎಲ್ಲ ಮೋರ್ಚಾ ಘಟಕಗಳು ಬಲವಾಗಬೇಕಿದೆ. ತನ್ಮೂಲಕ ಪಕ್ಷ ಬಲಗೊಳಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

    ಇದೇ ವೇಳೆ ರಾಜ್ಯ ಬಜೆಟ್​ ವಿಚಾರವಾಗಿ ಮಾತನಾಡಿ ಮಾ.5ರಂದು ಬಜೆಟ್ ಮಂಡನೆಯಾಗಲಿದೆ. ರೈತಪರ ಹಾಗೂ ಜನಪರ ಬಜೆಟ್ ಮಂಡನೆ ಮಾಡುತ್ತೇವೆ. ರಾಜ್ಯವನ್ನ ಮಾದರಿ ರಾಜ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts