ಬಿಎಸ್​ವೈ ಪ್ರಮಾಣ ವಚನಕ್ಕೆ ಅನುಮತಿ: ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲವೆಂದ ಸಿದ್ದು, ಪ್ರಜಾಪ್ರಭುತ್ವದ ವಿರೋಧಿ ಎಂದ ಜೆಡಿಎಸ್​

Latest News

ಈ ಅರಿಭಯಂಕರ ವೇಗಿ ಭಾರತದ ಮಾಲ್ಕಂ ಮಾರ್ಷಲ್​ ಎಂದು ಸುನಿಲ್​ ಗಾವಸ್ಕರ್​ ಹೊಗಳಿದ್ದು ಯಾರನ್ನ?

ನವದೆಹಲಿ: ಭಾರತ ಕ್ರಿಕೆಟ್​ ತಂಡದಲ್ಲಿ ಹಿಂದೊಮ್ಮೆ ವೇಗಿಗಳನ್ನು ಚೆಂಡಿನ ಹೊಳಪನ್ನು ತೆಗೆದುಹಾಕಲು ಬಳಸುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ ಇಂಥ ಒಂದು ನಂಬಿಕೆಯನ್ನು ನೀಗಿಸಿದವರು...

ಕೃಷಿ ಮಾರುಕಟ್ಟೆಯಲ್ಲಿ ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಕೃಷಿ ಅಧಿಕಾರಿ

ಹಾಪುರ್ (ಉತ್ತರ ಪ್ರದೇಶ): ಹಿರಿಯ ಕೃಷಿ ಅಧಿಕಾರಿಯೊಬ್ಬರು ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ತರಕಾರಿ ನಾಶ ಮಾಡಿದ ಘಟನೆ ಹಾಪುರ್​ ಜಿಲ್ಲೆಯ...

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

ಬೆಂಗಳೂರು: ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲು ತಯಾರಿ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಅನುಮತಿ ನೀಡಿದ ರಾಜ್ಯಪಾಲರಾದ ವಜುಭಾಯಿ​ ವಾಲಾ ಅವರ ನಡೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದು, ಜೆಡಿಎಸ್​ ಕೂಡ ಧ್ವನಿಗೂಡಿಸಿದೆ.

ಗುರುವಾರ ಬೆಳಗ್ಗೆ ರಾಜಭವನಕ್ಕೆ ತೆರಳಿದ ಬಿಎಸ್​ವೈ ರಾಜ್ಯಪಾಲರಿಂದ ಅನುಮತಿ ಪಡೆದ ಬಳಿಕ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು. ಇದರ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್‌ ಷಾರವರು ಹಾಗೂ ಕಾರ್ಯಾಧ್ಯಕ್ಷರಾದ ಜೆ.ಪಿ.ನಡ್ಡಾ ರವರ ಸೂಚನೆಯ ಮೇರೆಗೆ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇನೆ ಹಾಗೂ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಟ್ವೀಟ್​​​ ಮೂಲಕವೂ ಖಚಿತಪಡಿಸಿದ್ದರು.

ಬಿಎಸ್​ವೈ ಹೇಳಿಕೆ ಬೆನ್ನಲ್ಲೇ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಬಹುಮತ ಇಲ್ಲದೆ ಇದ್ದರೂ ಬಿ.ಎಸ್​​​.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು, ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

ಜೆಡಿಎಸ್​ ಕೂಡ ವಿರೋಧ ವ್ಯಕ್ತಪಡಿಸಿದ್ದು ವಿಧಾನಸಭೆಯ ಸಂಖ್ಯಾಬಲ 222 ಆಗಿದ್ದು, ಬಹುಮತಕ್ಕೆ 112 ಸಂಖ್ಯಾಬಲ ಬೇಕಾಗಿದೆ. ಆದರೆ, ಯಡಿಯೂರಪ್ಪ ಅವರು ನನಗೆ 105 ಶಾಸಕರ ಬೆಂಬಲವಿದೆ ಎಂದು‌ ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು, ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಟ್ವೀಟ್​ ಮೂಲಕ ತಿಳಿಸಿದೆ. (ದಿಗ್ವಿಜಯ ನ್ಯೂಸ್​)

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....