More

    ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್​ ಆಗತ್ತಾ? ಸಿಎಂ ಯಡಿಯೂರಪ್ಪ ಸ್ಪಷ್ಟನೆ ಹೀಗಿದೆ ನೋಡಿ..

    ಬೆಂಗಳೂರು: ಕರ್ನಾಟಕದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್​ಡೌನ್​ ಜಾರಿಯಾಗುತ್ತದೆಯೇ ಎನ್ನುವ ಚರ್ಚೆಗಳೂ ಆರಂಭವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಲಾಕ್​ಡೌನ್​ ಕುರಿತಾಗಿ ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿ ದಿನವೊಂದಕ್ಕೆ 40 ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢವಾಗುತ್ತಿವೆ. ಆದರೆ ಕರ್ನಾಟಕದಲ್ಲಿ ಸದ್ಯ ದಿನಕ್ಕೆ 3 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮರಣ ಪ್ರಮಾಣ ಬೇರೆಲ್ಲ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ. ಹಾಗಾಗಿ ಲಾಕ್​ಡೌನ್​ ಮಾಡುವ ಮಾತಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಇನ್ನು 15 ದಿನಗಳ ಕಾಲ ಯಾವುದೇ ರೀತಿಯ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ರಾಜ್ಯದ ಬೇರೆ ಬೇರೆ ಜಿಲ್ಲೆಗಳೊಂದಿಗೆ 2 ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿಯೂ 250 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಏಪ್ರಿಲ್ 5 ರಿಂದ ಕಾರ್ಯಾರಂಭ ಮಾಡಲು ಸಜ್ಜುಗೊಳಿಸಲಾಗುತ್ತಿದೆ. ನಗರದಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ನಿರ್ವಹಿಸಲು ಸರ್ಕಾರ, ಬಿಬಿಎಂಪಿ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು ಈಗಾಗಲೇ ಎಚ್.ಎ.ಎಲ್. ಮತ್ತು ಹಜ್ ಭವನಗಳಲ್ಲಿ ತಲಾ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರುಗಳನ್ನು ತೆರೆಯಲಾಗಿದೆ.

    ಕರೊನಾ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಲು ಶಿಕ್ಷಣ ಇಲಾಖೆಯ ನೌಕರರನ್ನು ಬಳಸಿಕೊಳ್ಳಲಿದ್ದೇವೆ. ಸಂಪರ್ಕಿತರ ಪತ್ತೆಯ ಗುರಿಯನ್ನು ಸಹ 30ಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1166 ಬೆಡ್‍ಗಳನ್ನು ಮೀಸಲಿಡಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು.ಖಾಸಗಿ ಆಸ್ಪತ್ರೆಗಳಿಂದಲೂ ಸಹಕಾರ ಕೇಳಲಾಗಿದೆ. ವಿರೋಧ ಪಕ್ಷದವರ ಸಲಹೆಯನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

    ರಾಜ್ಯದ ಸ್ಲಂಗಳಲ್ಲಿ ಕರೊನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ. ಆದರೆ ಅಪಾರ್ಟ್​ಮೆಂಟ್​ಗಳಲ್ಲಿ ಹೆಚ್ಚಿದೆ. ಹಾಗಾಗಿ ಅಲ್ಲಿ ಕೋವಿಡ್​ ಲಸಿಕೆ ನೀಡಲು ವಿಶೇಷ ಅಭಿಯಾನವನ್ನು ಮಾಡುತ್ತಿದ್ದೇವೆ. ಮಾರ್ಚ್​ 9ರವರೆಗೆ ರಾಜ್ಯದ 6.61 ಲಕ್ಷ ಜನರಿಗೆ ಕರೊನಾ ಲಸಿಕೆ ಕೊಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

    ವೀಲ್​ ಚೇರ್​ನಲ್ಲಿ ಕುಳಿತು ಪಾದಯಾತ್ರೆ ಮಾಡಿದ ದೀದಿ!

    ‘ಬಿಜೆಪಿಯವರಿಗೆ ಸೌಟು, ಪೊರಕೆಯೇ ಬುದ್ಧಿ ಕಲಿಸಲಿದೆ’ ಗೆದ್ದೇ ಗೆಲ್ತಾರಂತೆ ದೀದಿ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts