More

    ರಾಜ್ಯಾಧ್ಯಕ್ಷ ಪಟ್ಟ ಸಿಕ್ಕ ಬೆನ್ನಿಗೇ ವಿಜಯೇಂದ್ರ ರಿಯಾಕ್ಷನ್; ಯಾರನ್ನೆಲ್ಲ ಉಲ್ಲೇಖಿಸಿ ಏನಂದ್ರು?

    ಬೆಂಗಳೂರು: ಹಲವು ದಿನಗಳಿಂದ ಕುತೂಹಲದ ಸಂಗತಿಯಾಗಿದ್ದ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ವಿಚಾರ ಇದೀಗ ಮುಗಿದಿದೆ. ಅದರಲ್ಲೂ ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕ ಬೆನ್ನಿಗೇ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿ ಧನ್ಯವಾದಗಳನ್ನು ತಿಳಿಸಿದ್ದಾರೆ.

    ರಾಜ್ಯಾಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಅವರು ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರುಗಳನ್ನು ಉಲ್ಲೇಖಿಸಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

    ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ತಮಗೆಲ್ಲ ತುಂಬು ಹೃದಯದ ಕೃತಜ್ಞತೆಗಳು ಎಂದು ವಿಜಯೇಂದ್ರ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆ ಮುಖಾಂತರ ಹೇಳಿಕೊಂಡಿದ್ದಾರೆ.

    ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂಬುದಾಗಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

    ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ಪಟ್ಟ; ರಾಜ್ಯದಲ್ಲಿ ತಗ್ಗಿಲ್ಲ ರಾಜಾಹುಲಿ ಪ್ರಭಾವ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts