ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ, ಸೋಮವಾರವೂ ಸಾಹಿತಿಗಳು, ಬಿಜೆಪಿ ನಾಯಕರು ಹಾಗೂ ಬೂತ್ ಅಧ್ಯಕ್ಷರ ಮನೆಗಳು, ಮಠಗಳಿಗೆ ಭೇಟಿ ನೀಡಿದರು.
ಮೊದಲಿಗೆ ಕುವೆಂಪುನಗರದ ಸಾಹಿತಿ ಪ್ರೊ.ಎಸ್.ಎಲ್.ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಅಲ್ಲಿಂದ ರಾಮಕೃಷ್ಣ ಆಶ್ರಮಕ್ಕೆ ತೆರಳಿ ಶ್ರೀ ಮುಕ್ತದಾನಂದಜಿ ಮಹಾರಾಜ್ ಅವರ ಆಶೀರ್ವಾದ ಪಡೆದರು. ಬಳಿಕ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ಶ್ರೀ ಸೋಮನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಆನಂತರ ಮಾಜಿ ಎಂಎಲ್‌ಸಿ ತೋಂಟದಾರ್ಯ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದರು.