ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕೊವಿಡ್​-19 ಸೋಂಕು; ಆಸ್ಪತ್ರೆಗೆ ದಾಖಲು

Zameer Ahmad Khan
Published on

ಬೆಂಗಳೂರು: ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಹಾಗೇ ತಮ್ಮ ಕೊವಿಡ್​-19 ಟೆಸ್ಟ್​ ರಿಪೋರ್ಟ್​​ನ್ನೂ ಕೂಡ ಪೋಸ್ಟ್​ ಮಾಡಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿದ್ದರಿಂದ ಇಂದು ಕರೊನಾ ಸೋಮಕಿನ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಸದ್ಯ ಜಮೀರ್​ ಅಹ್ಮದ್ ಖಾನ್ ಅವರ ಬೆಂಬಲಿಗರು, ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಆತಂಕ ಶುರುವಾಗಿದೆ. ಬೆಂಗಳೂರು ಗಲಭೆಯ ಬಳಿಕ ಜಮೀರ್​ ಹಲವು ಕಡೆ ಓಡಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net