ನ.25ರಂದು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧಾರ್ಮಿಕ ಕಾರ್ಯಕ್ರಮಕ್ಕೆ ಸಜ್ಜಾದ ಬಸ್ತಿಹೊಸಕೋಟೆ

Baahubali Mahamastakabhisheka Press Conference mandya
Published on

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಸ್ತಿ ಹೊಸಕೋಟೆ(ಬಸದಿ ಹೊಸಕೋಟೆ)ಯ ಬಾಹುಬಲಿ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನ.23ರಿಂದ ನ.25ರವರೆಗೆ ನಡೆಯಲಿದೆ ಎಂದು ಜೈನ ಸಮಾಜದ ಜಿಲ್ಲಾಧ್ಯಕ್ಷ ಶಾಂತಿ ಪ್ರಸಾದ್ ಹೇಳಿದರು.

23ರಂದು ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜ್ ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜ್ ಸಾನ್ನಿಧ್ಯದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಜೈನ ಟ್ರಸ್ಟ್ ಅಧ್ಯಕ್ಷ ಡಿ.ಸುರೇಂದ್ರಕುಮಾರ್ ವಹಿಸುವರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟನೆ ನೆರವೇರಿಸಲಿದ್ದು, ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಪ್ರಧಾನ ಭಾಷಣ ಮಾಡುವರು. ಮಾಜಿ ಶಾಸಕರಾದ ಎಂ.ಪುಟ್ಟಸ್ವಾಮಿಗೌಡ, ಬಿ.ಪ್ರಕಾಶ್, ತಹಸೀಲ್ದಾರ್ ನಿಸರ್ಗಪ್ರಿಯ ಭಾಗವಹಿಸಲಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

24ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮನೋಹರ್ ಜೈನ್ ಭಾಗವಹಿಸುವರು. 25ರಂದು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದು, ಶಾಸಕ ಎಚ್.ಟಿ.ಮಂಜು ಭಾಗವಹಿಸಲಿದ್ದಾರೆ. ದೆಹಲಿಯ ಗುರುಗಾವ್‌ನ ನವೀನ್‌ಜೈನ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಅಂದು ಮಧ್ಯಾಹ್ನ 3 ಗಂಟೆಗೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನೆರವೇರಲಿದೆ. ಹೊರನಾಡು ಜಯಶ್ರೀ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.

ರಾಕೇಶ್, ರತ್ನಾತ್ರಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net