25.7 C
Bangalore
Sunday, December 15, 2019

ಯೋಗೋತ್ಸವದಲ್ಲಿ ಮಿಂದೆದ್ದ ಕೃಷ್ಣ ನಗರಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಐದು ದಿನಗಳ ಬೃಹತ್ ಯೋಗ ಚಿಕಿತ್ಸೆ ಮತ್ತು ಧ್ಯಾನ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕೃಷ್ಣಮಠ ಪಾರ್ಕಿಂಗ್ ಪ್ರದೇಶದ ವಿಶಾಲ ಸ್ಥಳದಲ್ಲಿ ಸಾವಿರಾರು ಮಂದಿ ಯೋಗೋತ್ಸವದಲ್ಲಿ ಭಾಗವಹಿಸಿದರು. ಯೋಗಗುರು ಬಾಬಾ ರಾಮ್‌ದೇವ್ ನೇತೃತ್ವದಲ್ಲಿ ಐವತ್ತಕ್ಕೂ ಅಧಿಕ ಆಸನಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಮೂಲಕ ಸಾವಿರಾರು ಮಂದಿ ಯೋಗಾಭ್ಯಾಸ ಮಾಡಿದರು.
ಪರ್ಯಾಯ ಪಲಿಮಾರು ಮಠ ಆಶ್ರಯದಲ್ಲಿ ಆಯೋಜಿಸಲಾದ ಬೃಹತ್ ಯೋಗ ಶಿಬಿರವನ್ನು ಮುಂಜಾನೆ ಐದು ಗಂಟೆಗೆ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಯೋಗಗುರು ಬಾಬಾ ರಾಮ್‌ದೇವ್ ಉದ್ಘಾಟಿಸಿದರು. ದೂರದ ಊರುಗಳಿಂದ ಶಿಬಿರದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮುಂಜಾನೆ ಬೇಗನೆ ಬಸ್ಸುಗಳ ಸೇವೆ ಕಲ್ಪಿಸಲಾಗಿತ್ತು. ಮಕ್ಕಳು, ಯುವಕರು, ವೃದ್ಧರು ಆಸಕ್ತಿಯಿಂದ ಯೋಗ ಶಿಬಿರದಲ್ಲಿ ಪಾಲ್ಗೊಂಡದ್ದು ವಿಶೇಷವಾಗಿತ್ತು. ಸಾರ್ವಜನಿಕರು ಬೆಳಗ್ಗೆ 5ರಿಂದ 7.30ರವರೆಗೆ ಯೋಗ ಶಿಬಿರದಲ್ಲಿ ಪಾಲ್ಗೋಂಡಿದ್ದರು.

ಕನ್ನಡದಲ್ಲಿ ಮಾತು ಆರಂಭ: ಶಿಬಿರ ನಡೆಸಿಕೊಡುವ ಮೊದಲು ಬಾಬಾ ರಾಮ್‌ದೇವ್ ಕನ್ನಡದಲ್ಲಿ ಮಾತು ಆರಂಭಿಸಿ ರಾಜ್ಯದ ಸಮಸ್ತ ಸಹೋದರ, ಸಹೋದರಿಯರಿಗೆ ತನ್ನ ಪ್ರೀತಿಪೂರ್ವಕ ನಮಸ್ಕಾರ ಎಂದು ಯೋಗಾಸನ ಪ್ರಕ್ರಿಯೆ ಆರಂಭಿಸಿದರು. ಆರಂಭದಲ್ಲಿ ಸಿದ್ಧಾಸನ, ಪದ್ಮಾಸನ, ಸುಖಾಸನ, ಮುದ್ರಾ ವಿಶೇಷತೆಗಳ ಮಾಹಿತಿ ನೀಡಿದರು. ಪ್ರತಿಯೊಂದು ಆಸನದ ಪ್ರಾತ್ಯಕ್ಷಿಕೆ ನೀಡುವಾಗ ದೇಹವನ್ನು ಯಾವ ರೋಗಗಳಿಂದ ಮುಕ್ತವಾಗಿಸಬಹುದು ಎಂದು ಸಲಹೆ, ಉದಾಹರಣೆಯನ್ನೂ ನೀಡಿದರು. ಯೋಗಾಸನ ನಡುವೆ ಹಾಸ್ಯ ಚಟಾಕಿ ಹಾರಿಸುತ್ತ ಬಾಬಾ ಶಿಬಿರಾರ್ಥಿಗಳನ್ನು ರಂಜಿಸಿದರು.

ಎಲ್ಲವನ್ನೂ ಮೀರಿದ ವಿದ್ಯೆ ಯೋಗವೆಂದ ಪಲಿಮಾರು ಶ್ರೀ: ಶಿಬಿರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಪಲಿಮಾರು ಶ್ರೀಗಳು, ಯೋಗ ಜಾತಿ, ಮತ, ಲಿಂಗ ಎಲ್ಲವನ್ನೂ ಮೀರಿ ನಿಂತಿರುವ ವಿದ್ಯೆ. ಉತ್ತಮ ಶಾರೀರಿಕ ವ್ಯವಸ್ಥೆ, ಮಾನಸಿಕ ಸ್ಥಿತಿಗಾಗಿ ಯೋಗದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕರ್ನಾಟಕ ನೆಲ ಪುಣ್ಯಭೂಮಿ. ತಮ್ಮ ಅಪೇಕ್ಷೆಯಂತೆ ಕೃಷ್ಣನೂರಿಗೆ ಹರಿದ್ವಾರದಿಂದ ಆಗಮಿಸಿದ ಬಾಬಾ ರಾಮ್‌ದೇವ್ ಅವರಿಗೆ ನಾವು ಆಭಾರಿ. ಅವರ ಮಾರ್ಗದರ್ಶನದಲ್ಲಿ ಒಂದು ದಿನವೂ ಬಿಡದೆ ಯೋಗ ಶಿಕ್ಷಣ ಪಡೆದು ಶರೀರದ ಕ್ಷೇಮವನ್ನು ಕಾಪಾಡಿಕೊಳ್ಳೋಣ ಎಂದರು.

50ಕ್ಕೂ ಅಧಿಕ ಆಸನಗಳ ಪ್ರಾತ್ಯಕ್ಷಿಕೆ: ಬಾಬಾ ರಾಮ್‌ದೇವ್ ಮಂಡೂಕಾಸನ, ವಕ್ರಾಸನ, ಪವನ ಮುಕ್ತಾಸನ, ಉತ್ಥಾನ ಪಾದಾಸನ, ಭುಜಂಗಾಸನ, ಸೂರ್ಯ ನಮಸ್ಕಾರ, ಶೀಥಲಿಕರಣ ವ್ಯಾಯಮ, ಪರ್ವತಾಸನ, ಅನುಲೋಮ, ವಿಲೋಮ, ಮಯೂರಾಸನ, ಕಪಾಲಭಾತಿ, ನವ್ಲಿ ಆಸನಗಳ ಪ್ರಾತ್ಯಕ್ಷಿಕೆ ನೀಡಿದರು. ಶಿಬಿರದಲ್ಲಿ ಅವರು 50ಕ್ಕೂ ಅಧಿಕ ಆಸನಗಳ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಹರಿದ್ವಾರದಿಂದ ಆಗಮಿಸಿದ ಪತಂಜಲಿ ಯೋಗ ಶಿಕ್ಷಕರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಹರಿದ್ವಾರದ ಸಂಗೀತ ಕಲಾವಿದರು ಶಿಬಿರಕ್ಕೆ ಪೂರಕವಾಗಿ ಸುಶ್ರಾವ್ಯ ಸಂಗೀತ, ಭಜನೆಗಳ ಮೂಲಕ ಯೋಗದ ಮೆರುಗು ಹೆಚ್ಚಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...