20.4 C
Bangalore
Monday, December 9, 2019

ರಾಮ್‌ದೇವ್ ಆಧುನಿಕ ಪತಂಜಲಿ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಉಡುಪಿ: ಮಹರ್ಷಿ ಪತಂಜಲಿ ಯೋಗದ ಮೂಲಕ ಮನಸ್ಸಿನ ನೈರ್ಮಲ್ಯ ಮತ್ತು ವೈದ್ಯಕೀಯ ಶಾಸ್ತ್ರದಲ್ಲಿ ಶರೀರ ಶುದ್ಧಿಗೆ ಆದ್ಯತೆ ನೀಡಿದ್ದರು. ಯೋಗದಿಂದ ಸರ್ವ ರೋಗ ಪರಿಹಾರವಾಗುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದರು. ಬಾಬಾ ರಾಮ್‌ದೇವ್ ಆಧುನಿಕ ಪತಂಜಲಿ. ಯೋಗದ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಅವರು ಉಡುಪಿಗೆ ಆಗಮಿಸಿರುವುದು ನಮ್ಮ ಯೋಗ ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದರು.
ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಪರ್ಯಾಯ ಪಲಿಮಾರು ಮಠ, ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಯೋಗ ಶಿಬಿರದ ಎರಡನೇ ದಿನ ಭಾನುವಾರ ಅವರು ಆಶೀರ್ವಚನ ನೀಡಿದರು.
ಪ್ರಾಣಾಯಾಮ ಮನಸ್ಸಿನ ಏಕಾಗ್ರತೆಗೆ ಸಹಕಾರಿ. ಪರಮಾತ್ಮನ ಧ್ಯಾನವೇ ಮುಖ್ಯ ಯೋಗ. ಶರೀರದ ಆರೋಗ್ಯ ಮತ್ತು ಮನಸ್ಸಿನ ಏಕಾಗ್ರತೆಗೆ ಯೋಗ ಅತೀ ಅಗತ್ಯ. ನಿತ್ಯ ನಾನೂ ಸ್ವಲ್ಪ ಸ್ವಲ್ಪ ಯೋಗ ಮಾಡುತ್ತೇನೆ. ಆದರೆ ಬಾಬಾ ಹೇಳಿದಂತೆ ಸಿದ್ಧಪುರುಷನಲ್ಲ. ಕೇವಲ ಸಾಧಕ. ರಾಮ್‌ದೇವ್ ಅವರಿಂದ ಸಮಾಜಕ್ಕೆ ವಿಶೇಷ ಸೇವೆ ಲಭಿಸಲಿ ಎಂದು ಹಾರೈಸಿದರು.
ಬಾಬಾ ರಾಮ್‌ದೇವ್ ಮಾತನಾಡಿ, ಪೇಜಾವರ ಶ್ರೀಗಳು ದಿನದಲ್ಲಿ 18 ಗಂಟೆ ಕ್ರಿಯಾಶೀಲರಾಗಿರುತ್ತಾರೆ. ಅವರ ಆರೋಗ್ಯ ನಮಗೆ ಪ್ರೇರಣೆ. ಅವರು ಸಾಧು ಧರ್ಮವನ್ನು ಉತ್ತಮ ರೀತಿಯಲ್ಲಿ ಪಾಲಿಸುತ್ತಿದ್ದಾರೆ. 89ರ ಹರೆಯದ ಶ್ರೀಗಳು ಶತಾಯುಷಿಗಳಾಗಬೇಕು. ಶತಮಾನೋತ್ಸವ ಆಚರಿಸಲು ನಾವು ಬಯಸುತ್ತೇವೆ ಎಂದರು.
ಹರಿದ್ವಾರದ ಪತಂಜಲಿ ಯೋಗ ಪೀಠದ ಆಚಾರ್ಯ ಶ್ರೀ ಬಾಲಕೃಷ್ಣ ಹಿಂದಿಯಲ್ಲಿ ರಚಿಸಿರುವ ಆಯುರ್ವೇದ ರಹಸ್ಯ ಎಂಬ ಪುಸ್ತಕ ವನ್ನು ಮಂಗಳೂರಿನ ಅನ್ನಪೂರ್ಣಾ ಮಹಾಬಲೇಶ್ವರ ಭಟ್ ಕನ್ನಡಕ್ಕೆೆ ಅನುವಾದಿಸಿದ್ದು, ಬಾಬಾ ರಾಮ್ದೇವ್ ಲೋಕಾರ್ಪಣೆಗೊಳಿಸಿದರು. ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾಂಕಿನ ಸಿಇಒ ಮತ್ತು ಆಡಳಿತ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಶಿಬಿರಾರ್ಥಿಗಳ ಸಂಖ್ಯೆ ಹೆಚ್ಚಳ: ಭಾನುವಾರ ಯೋಗ ಶಿಬಿರದಲ್ಲಿ 4 ಸಾವಿರ ಮಂದಿ ಭಾಗವಹಿಸಿದ್ದರು. ಪ್ರಾರಂಭದ ದಿನಕ್ಕೆ ಹೋಲಿಸಿದರೆ ಆಸಕ್ತರ ಸಂಖ್ಯೆ ಹೆಚ್ಚಳವಾಗಿದ್ದು, ರಜೆಯ ಕಾರಣದಿಂದ ನೂರಾರು ಸಂಖ್ಯೆಯಲ್ಲಿ ಉದ್ಯೋಗಸ್ಥರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ವೇದಿಕೆಯಲ್ಲೇ ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಯೋಗಾಸನ ಭಂಗಿ ಪ್ರದರ್ಶಿಸಿ, ಗಮನ ಸೆಳೆದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...