More

    ಇಸ್ರೇಲ್​-ಹಮಾಸ್​ ಯುದ್ಧ: ನಿಜವಾಗುತ್ತಾ ಬಲ್ಗೇರಿಯನ್ ನಿಗೂಢ ಮಹಿಳೆ ಬಾಬಾ ವಂಗಾರ ಭವಿಷ್ಯವಾಣಿ?

    ಸೋಫಿಯಾ: ಬಲ್ಗೇರಿಯನ್​ನ ನಿಗೂಢ ಮಹಿಳೆ, ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ ಅವರ ಭವಿಷ್ಯವಾಣಿ ಇದಾಗಲೇ ಜಗದ್ವಿಖ್ಯಾತಿ ಪಡೆದಿದೆ. 1996ರಲ್ಲಿ ಮೃತಪಟ್ಟಿರುವ ಬಾಬಾ ವಂಗಾ 5079ನೇ ಇಸವಿಯವರೆಗೂ ಏನೇನಾಗಲಿದೆ ಎನ್ನುವುದನ್ನು ಕಂಡು ಕೊಂಡಿದ್ದಾಗಿ ಹೇಳಿದ್ದು, ಅದನ್ನು ಸಮಾಜಕ್ಕೆ ತಿಳಿಸಿಯೇ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.

    ಅನೇಕ ಭವಿಷ್ಯಗಳು ನಿಜವಾಗಿವೆ
    ಉಗ್ರರು ಅಮೆರಿಕದ ಮೇಲೆ ನಡೆಸಿದ ದಾಳಿ (9/11), ಚೆರ್ನೋಬಿಲ್‌ ದುರಂತ, ಪ್ರಿನ್ಸೆಸ್ ಡಯಾನಾ ಸಾವು, 2004ರ ಥಾಯ್ಲೆಂಡ್‌ ಸುನಾಮಿ, ಬರಾಕ್‌ ಒಬಾಮಾ ಅಧ್ಯಕ್ಷ ಪಟ್ಟಕ್ಕೇರುವುದು…ಇಂಥ ನೂರಾರು ಘಟನೆಗಳ ಕುರಿತು ಹಲವು ದಶಕಗಳ ಮುಂಚೆಯೇ ನುಡಿದಿದ್ದರು ಇವರು. ಅಷ್ಟೇ ಏಕೆ ಮಹಾಮಾರಿ ಕರೊನಾ ವೈರಸ್​ ಕುರಿತು ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ. 15ನೇ ಶತಮಾನದ ಜ್ಯೋತಿಷಿ ನಾಸ್ಟ್ರಾಡಮಸ್‌ಗೆ ಬಾಬಾ ವಂಗಾ ಅವರನ್ನು ಹೋಲಿಕೆ ಮಾಡಲಾಗುತ್ತದೆ. ಅವರ ಭವಿಷ್ಯವಾಣಿಗಳು ಶೇಕಡ 85ರಷ್ಟು ನಿಖರ ಎನ್ನಲಾಗುತ್ತಿದೆ.

    ಭಾರತದಲ್ಲಿ, ತಾಪಮಾನವು 50 ಡಿಗ್ರಿಗಳನ್ನು ತಲುಪುತ್ತದೆ ಮತ್ತು ಮಿಡತೆಗಳು ಬೆಳೆಗಳನ್ನು ಹಾನಿಗೊಳಿಸುತ್ತವೆ ಎಂದು ಬಾಬಾ ವಂಗಾ ನುಡಿದಿದ್ದು ಕೂಡ ಇದಾಗಲೇ ನಿಜವಾಗಿದೆ. 2022ರಲ್ಲಿ ಹಲವು ಏಷ್ಯನ್ ರಾಷ್ಟ್ರಗಳು ಮತ್ತು ಆಸ್ಟ್ರೇಲಿಯಾದಲ್ಲಿ ಪ್ರವಾಹ ಉಂಟಾಗಲಿದೆ ಎಂದು ಹೇಳಿದ್ದರು. ಅದರಂತೆ ಆಸ್ಟ್ರೇಲಿಯಾದಲ್ಲಿ ಅತ್ಯಂತ ಭೀಕರ ಪ್ರವಾಹ ಸಂಭವಿಸಿದೆ. ಆಗ್ನೇಯ ಕ್ವೀನ್ಸ್‌ಲ್ಯಾಂಡ್‌ನ ಕೆಲವು ಭಾಗಗಳು, ವೈಡ್ ಬೇ-ಬರ್ನೆಟ್ ಮತ್ತು ನ್ಯೂ ಸೌತ್ ವೇಲ್ಸ್, ಬ್ರಿಸ್ಬೇನ್ ಸೇರಿದಂತೆ ಹಲವಾರು ನಗರಗಳು ಮುಳುಗಿದವು.

    ಇಸ್ರೇಲ್​-ಹಮಾಸ್​ ಯುದ್ಧ
    ಇದೀಗ ಬಾಬಾ ವಂಗಾ ನುಡಿದಿರುವ ಮತ್ತೊಂದು ಭವಿಷ್ಯ ನಿಜವಾಗಲಿದೆಯಾ ಎಂಬ ಲೆಕ್ಕಾಚಾರ ಶುರುವಾಗಿದೆ. 2023ರಲ್ಲಿ ಮೂರನೇ ವಿಶ್ವ ಯುದ್ಧ ನಡೆಯಬಹುದು ಮತ್ತು ಅಣ್ವಸ್ತ್ರಗಳನ್ನು ಬಳಸಬಹುದೆಂದು ಭವಿಷ್ಯ ನುಡಿದಿದ್ದರು. ಅಲ್ಲದೆ, ದೊಡ್ಡ ಮುಸ್ಲಿಂ ಯುದ್ಧ ನಡೆಯುತ್ತದೆ ಎಂದಿದ್ದರು. ಇದೀಗ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರ ನಡುವೆ ನಡೆಯುತ್ತಿರುವ ಯುದ್ಧ ನೋಡಿದರೆ ಮೂರನೇ ವಿಶ್ವಯುದ್ಧ ನಡೆಯುತ್ತಾ? ಎಂಬ ಪ್ರಶ್ನೆ ಮೂಡಿದೆ.

    ಇದನ್ನೂ ಓದಿ: ಬದಲಾಗದ ಟ್ರುಡೊ…ಭಾರತದ ವಿರುದ್ಧ ಅರಬ್​ ರಾಷ್ಟ್ರಗಳನ್ನು ಎತ್ತಿಕಟ್ಟುವ ಯತ್ನ

    ಭಾರತ, ಅಮೆರಿಕ ಸೇರಿದಂತೆ ಎಲ್ಲ ಯುರೋಪಿಯನ್​ ದೇಶಗಳು ಇಸ್ರೇಲ್​ ಅನ್ನು ಬೆಂಬಲಿಸಿದರೆ, ರಷ್ಯಾ ಹಾಗೂ ಅರಬ್​ ದೇಶಗಳು ಪ್ಯಾಲೆಸ್ತೀನ್​ ಪರ ಧ್ವನಿ ಎತ್ತುತ್ತಿದ್ದಾರೆ. ಇದು ಮೂರನೇ ವಿಶ್ವಯುದ್ಧಕ್ಕೆ ಮುನ್ನುಡಿ ಬರೆಯುತ್ತಾ ಎಂಬ ಮಾತುಗಳು ಜಾಗತಿಕ ಮಟ್ಟದಲ್ಲಿ ಕೇಳಿಬರುತ್ತಿವೆ. ಅಲ್ಲದೆ, ಈ ಯುದ್ಧದಲ್ಲಿ ಅಣ್ವಸ್ತ್ರ ಬಳಕೆಯ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಇಸ್ರೇಲ್​-ಹಮಾಸ್​ ನಡುವೆ ದಿನೇ ದಿನೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದು, ಇದು ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

    5079ರಲ್ಲಿ ಬ್ರಹ್ಮಾಂಡವು ಕೊನೆಗೊಳ್ಳುತ್ತದೆ
    ಇಡೀ ಜಗತ್ತಿನ ನೂರಾರು ವರ್ಷಗಳ ಹಾಗುಹೋಗುಗಳ ಬಗೆಗೆ ಭವಿಷ್ಯ ನುಡಿದಿರುವ ಬಾಗಾ ವಂಗಾ ಪ್ರಕಾರ, 5079ಕ್ಕೆ ಜಗತ್ತು ಕೊನೆಯಾಗುತ್ತದೆ. 2023ರಲ್ಲಿ ಭೂಮಿಯ ಕಕ್ಷೆಯು ಬದಲಾಗುತ್ತದೆ, 2028ರಲ್ಲಿ ಮಾನವರು ಶುಕ್ರವನ್ನು ಭೇಟಿ ಮಾಡುತ್ತಾರೆ, ಮುಸ್ಲಿಮರು 2043 ರಲ್ಲಿ ಯುರೋಪ್ ಅನ್ನು ಆಳುತ್ತಾರೆ ಮತ್ತು 5079 ರಲ್ಲಿ ಬ್ರಹ್ಮಾಂಡವು ಕೊನೆಗೊಳ್ಳುತ್ತದೆ ಎಂದು ಆಕೆಯ ಭವಿಷ್ಯದ ಭವಿಷ್ಯವಾಣಿಗಳು ಸೇರಿವೆ.

    ಸದ್ಯದ ಮಾಹಿತಿ ಮೇರೆಗೆ ಇಸ್ರೇಲ್ ಮತ್ತು ಹಮಾಸ್​ ಉಗ್ರರ ದಾಳಿ-ಪ್ರತಿದಾಳಿಯಲ್ಲಿ 1600ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

    ಇಸ್ರೇಲ್- ಪ್ಯಾಲೆಸ್ತೀನ್ ವಿವಾದವೇನು?
    ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.

    ಗಾಜಾ ಪಟ್ಟಿ ಎಂದರೇನು? : ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ. (ಏಜೆನ್ಸೀಸ್​)

    ಅತ್ತಿಬೆಲೆ ಪಟಾಕಿ ದುರಂತ; ತಹಶೀಲ್ದಾರ್, ಇನ್‌ಸ್ಪೆಕ್ಟರ್ ಅಮಾನತು

    ‘ಭಾಯ್’ ಎಂದು ಕರೆಯಲಿಲ್ಲ!; ಗುಂಪು ಘರ್ಷಣೆಯಲ್ಲಿ ಹೋಯಿತು ಇಬ್ಬರ ಜೀವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts