17 C
Bangalore
Monday, December 9, 2019

ಮಠದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಮುತ್ಯಾನ ಬಬಲಾದ ಮಠದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೀದರ್ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.
ಮುತ್ಯಾನ ಬಬಲಾದ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಶ್ರೀ ಚನ್ನವೀರೇಶ್ವರ ವಿರಕ್ತ ಮಠದಲ್ಲಿ ಸಿದ್ಧಬಸವೇಶ್ವರರ 64ನೇ ಜಾತ್ರಾ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಸಭೆ ಉದ್ಘಾಟಿಸಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತಂದು ಮಠದ ಅಭಿವೃದ್ಧಿಗೆ ಕೈಜೋಡಿಸಲಾಗುವುದು. ಚುನಾವಣಾ ಪೂರ್ವದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಠಕ್ಕೆ ಭೇಟಿ ನೀಡಿ ಬಬಲಾದ ಶ್ರೀಗಳ ಆಶೀರ್ವಾದ ಪಡೆದ ಜೆಡಿಎಸ್ ಸರ್ಕಾರ ರಚನೆಯಾಗಿದೆ ಎಂದರು.
ಭಾಲ್ಕಿ ತಾಲೂಕಿನ ಹಲಬರ್ಗಾದ ಹಾವಲಿಂಗೇಶ್ವರರ ರಾಚೋಟೇಶ್ವರ ಶಿವಾಚಾರ್ಯರು ಮಾತನಾಡಿ, ಗುರುಪಾದಲಿಂಗ ಮಹಾಶಿವಯೋಗಿಗಳು ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಮಾಡುವುದರ ಜತೆಗೆ ಕೃಷಿಯಲ್ಲಿ ಹಲವು ರೀತಿ ಸಾಧನೆ ಮಾಡಿ, ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಮಾತನಾಡಿದರು. ಚಿಂಚನಸೂರ ಕಲ್ಮಠನ ಸಿದ್ಧಮಲ್ಲ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ಹಿರೇಮಠನ ವೀರಭದ್ರ ಶಿವಾಚಾರ್ಯರು, ಸೂಗೂರ (ಕೆ) ಚನ್ನರುದ್ರ ಮುನೇಶ್ವರ ಶಿವಾಚಾರ್ಯರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣಬಸಪ್ಪ ಅಷ್ಟಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ, ಬಸವಕಲ್ಯಾಣ ಪೌರಾಯುಕ್ತ ಸುರೇಶ ಬಬಲಾದ ಮಾತನಾಡಿದರು. ಮಠದ ಪೀಠಾಧಿಪತಿ ಗುರುಪಾದಲಿಂಗ ಶಿವಯೋಗಿಗಳು ನೇತೃತ್ವ ವಹಿಸಿದ್ದರು. ಜಯಶ್ರೀ ಮತ್ತಿಮೂಡ, ಕೋಹಿನೂರ ದರ್ಗದ ಬಿಸ್ಮಿಲ್ಲಾ ಶಹಾ, ಅವರಾದ ಚರಂತಿ ಮಠದ ಮರುಳಸಿದ್ಧ ಶಿವಾಚಾರ್ಯ, ಬೆಡಸೂರನ ಪರ್ವತಲಿಂಗ ಪರಮೇಶ್ವರ ಮಹಾರಾಜ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಜೆಡಿಎಸ್ ಮುಖಂಡ ದೇವೆಗೌಡ ತೆಲ್ಲೂರ, ಪಾಲಿಕೆ ಸದಸ್ಯ ರಾಜು ಕಪನೂರ, ಬಸವೇಶ್ವರ ಆಸ್ಪತ್ರೆಯ ಶರಣಗೌಡ ಪಾಟೀಲ್ ಪಾಳಾ, ಗ್ರಾಪಂ ಅಧ್ಯಕ್ಷೆ ಗುಂಡಮ್ಮ ಲೇಂಗಟಿ, ಮಹಾಗಾಂವ ಬಿಜೆಪಿ ಮುಖಂಡ ಶಿವಕುಮಾರ ಪಸಾರ, ಜಗನ್ನಾಥ ಮಾಲಿಪಾಟೀಲ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಜಗದೀಶ ಪಾಟೀಲ್ ಸಣ್ಣೂರ, ಚನ್ನವೀರ ಹಿರೇಮಠ, ಬಸಯ್ಯ ಶಾಸ್ತ್ರಿ ಇತರರು ಇದ್ದರು.

ಜಂಗಿ ಕುಸ್ತಿ: ಬಯಲು ಜಂಗಿ ಕುಸ್ತಿ ಪಂದ್ಯಾವಳಿಯಲ್ಲಿ ಪೈಲ್ವಾನರ ಸಾಹಸ ಪ್ರದರ್ಶನ ನೆರೆದಿದ್ದ ಅಪಾರ ಸಂಖ್ಯೆಯ ಪ್ರೆಕ್ಷಕರಿಗೆ ರಸದೌತಣ ಉಣಬಡಿಸಿತು. ಗಿಗೀ ಪದಗಳು, ಕೋಹಿನೂರ ಪಹಾಡ್ ದರ್ಗಾದ ಪೂಜ್ಯ ಶ್ರೀ ಬಿಸ್ಮೀಲಾ ಶಹಾ ಅಧ್ಯಕ್ಷತೆಯಲ್ಲಿ ಮದ್ದು ಸುಡುವ ಕಾರ್ಯಕ್ರಮ ಜರುಗಿತು. ನಂತರ ಹೊಡೆಲ್, ವಾಗ್ದರ್ಗಿ, ಯಕಲೂರ ಭಜನಾ ಮಂಡಳಿಗಳಿಂದ ಹಾಗೂ ಸಂಗೀತ ಗವಾಯಿಗಳಿಂದ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...