ಸಿನಿಮಾ

ಬಹಿರಂಗ ಪ್ರಚಾರ ಅಂತ್ಯವಾದರೂ ಬಿಜೆಪಿ ಅಭ್ಯರ್ಥಿ ಬಹಿರಂಗ ಸಭೆ! ಎಂ.ಬಿ. ಪಾಟೀಲ್ ಆರೋಪ

ವಿಜಯಪುರ: ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾದರೂ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಭರ್ಜರಿ ಪ್ರಚಾರ ನಡೆದಿದೆ. ತಿಕೋಟಾ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಹಾಗೂ ಬೆಂಬಲಿಗರು ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಟ್ವಿಟರ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿದ್ದ ಮತ್ತೊಂದು ಚೀತಾ ಸಾವು

ತಿಕೋಟಾ ಪಟ್ಟದ ಸರ್ಕಲ್​ನಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಬೆಂಬಲಿಗರು ನಂಬರ್ ಪ್ಲೇಟ್ ಇಲ್ಲದ ವಾಹನಗಳಲ್ಲಿ ಬಂದು ಪ್ರಚಾರ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ನೀತಿ ಸಂಹಿತ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಎಂ.ಬಿ.ಪಾಟೀಲ್ ಸುದ್ದಿಗೋಷ್ಠಿ ರದ್ದು ಮಾಡಿದ್ದರು.

ಇದನ್ನೂ ಓದಿ: ಶಿಕ್ಷಕನ ಮುಖಕ್ಕೆ ​​ಪೆಪ್ಪರ್ ಸ್ಪ್ರೇ ಮಾಡಿದ ವಿದ್ಯಾರ್ಥಿನಿ; ಮುಂದೇನಾಯ್ತು?..ವಿಡಿಯೋ ನೋಡಿ

ಬಬಲೇಶ್ವರ ಕ್ಷೇತ್ರದಲ್ಲಿ ಜಂಗಲ್ ರಾಜ್ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಸತ್ತಂತಿದೆ. ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಿಗರು ನಂಬರ್ ಪ್ಲೇಟ್ ಇಲ್ಲದ ಕಾರುಗಳಲ್ಲಿ ಪೊಲೀಸರ ಕಣ್ಣ ಮುಂದೆಯೇ ಒಡಾಡುತ್ತಿದ್ದಾರೆ. ಡಿಸಿ, ಎಸ್​ಪಿ ಹಾಗೂ ಚುನಾವಣಾ ಅಧಿಕಾರಿಗಳು ನಿದ್ರಿಸುತ್ತಿದ್ದಾರೆಯೇ? ನೀತಿ ಸಂಹಿತೆಯ ಘನ ಘೋರ ಉಲ್ಲಂಘನೆಯಾಗಿದೆ ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

Latest Posts

ಲೈಫ್‌ಸ್ಟೈಲ್