More

    ಅಸ್ಪಶ್ಯತೆ ನಿವಾರಣೆಗೆ ಶ್ರಮಿಸಿದ್ದ ಬಾಬೂಜಿ

    ಯಳಂದೂರು: ಬಾಬು ಜಗಜೀವನ ರಾಮ್ ಮಾಡಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ತಿಳಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಹಾರದಲ್ಲಿ ಬಡ ಕುಟುಂಬವೊಂದರಲ್ಲಿ ಜನಿಸಿದ್ದ ಜಗಜೀವನ್ ರಾಮ್, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದರು. ಸಮಾಜದ ಬದಲಾವಣೆಗೆ ಶಿಕ್ಷಣವೇ ಬಹಳ ಮುಖ್ಯ ಎಂದು ಬಲವಾಗಿ ನಂಬಿದ್ದರು. ಸ್ವಂತ ಶಕ್ತಿ ಮೇಲೆ ದೇಶದ ಉಪಪ್ರಧಾನಿ ಹುದ್ದೆ ಅಲಂಕಡಿಸಿದರು. ಮೇಲು-ಕೀಳು, ತಾರತಮ್ಯ, ಜಾತಿ ಪದ್ಧತಿ, ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ್ದರು. ಸಾಮಾಜಿಕ ಬದಲಾವಣೆಗಾಗಿ ಹೋರಾಟ ನಡೆಸಿದ್ದರು. ಶೋಷಿತರ ಪರವಾಗಿ ಧ್ವನಿ ಎತ್ತಿದ ಅವರ ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಹಾಕಿಕಟೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ಕರೆ ನೀಡಿದರು.

    ತಹಸೀಲ್ದಾರ್ ನಿಸರ್ಗಪ್ರಿಯ, ಸಬ್ ಇನ್ಸ್‌ಪೆಕ್ಟರ್ ನಂದೀಶ್, ಕ್ಷೇತ್ರಶಿಕ್ಷಣಾಧಿಕಾರಿ ಕಾಂತರಾಜು, ಬಾಬು ಜಗಜೀವನ್ ರಾಮ್ ಸಂಘದ ತಾಲೂಕು ಅಧ್ಯಕ್ಷ ಬಸವರಾಜು , ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ಕೆಸ್ತೂರು ಮಾರಪ್ಪ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts