More

    ಡಿಕೆಶಿ ಸಹಾಯವನ್ನು ಏಳೇಳು ಜನ್ಮಕ್ಕೂ ಮರೆಯುವುದಿಲ್ಲ: ಬಾಬುರಾವ್ ಚಿಂಚನಸೂರ್

    ಬೆಂಗಳೂರು: ‘‘ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಡಿ.ಕೆ. ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ’’ ಎಂದು ಮಾಜಿ ಸಚಿವ, ವಿಧಾನಪರಿಷತ್ ಮಾಜಿ ಸದಸ್ಯ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.

    ನಿನ್ನೆಯಷ್ಟೇ ಬಿಜೆಪಿ ತೊರೆದಿದ್ದ ಚಿಂಚನಸೂರ್, ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘‘ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಅಂತ ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂಬುದನ್ನು ತೋರಿಸುತ್ತೇನೆ’’ ಎಂದು ಹೇಳಿದರು.

    ಇದನ್ನೂ ಓದಿ: ಉಕ್ರೇನ್​ ಶಾಲೆಯ ಮೇಲೆ ರಷ್ಯಾದ ಡ್ರೋನ್ ದಾಳಿ; 3 ಮಂದಿ ಮೃತ್ಯು, ಏಳು ಮಂದಿ ಗಂಭೀರ
    ‘‘ಖರ್ಗೆ ಅವರ ಮೇಲೆ ಕೋಪಗೊಂಡು ಹಿಂದೆ ನೀವು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಿರಿ’’ ಎಂದು ಚಿಂಚನಸೂರು ಅವರನ್ನು ಪ್ರಶ್ನಿಸಿದಾಗ, ‘‘ತಂದೆ ಮಗನ ಜಗಳ ಇದ್ದೇ ಇರುತ್ತದೆ. ಅದು ಈಗ ಸರಿ ಹೋಗಿದೆ’’ ಎಂದು ಉತ್ತರಿಸಿದ್ದಾರೆ.

    ‘‘ಖರ್ಗೆ ಅವರನ್ನು ಸೋಲಿಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ತೊಡೆ ತಟ್ಟಿದ್ದವರು ಈಗ ಅವರ ಪಕ್ಷ ಸೇರುತ್ತಿದ್ದೀರಿ, ಇದು ಅವಕಾಶವಾದಿ ರಾಜಕಾರಣವಲ್ಲವೇ’’ ಎಂಬ ಪ್ರಶ್ನೆಗೆ, ‘‘ನಾನು ಅವಕಾಶವಾದಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನನಗೆ ತಂದೆ, ತಾಯಿ, ಮಕ್ಕಳಿಲ್ಲ. ನಾನು ಮತ್ತು ನನ್ನ ಪತ್ನಿ ಮಾತ್ರ ಇದ್ದೇವೆ. ಸುಮಾರು 30 ವರ್ಷಗಳಿಂದ ಜನರ ಸೇವೆ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ದುಡಿದಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ನೀಡುತ್ತೇನೆ. ಚಿತ್ತಾಪುರದಲ್ಲಿ ಬಿಜೆಪಿ ಹೇಳಹೆಸರಿಲ್ಲದಂತೆ ಮಾಡುತ್ತೇವೆ’’ ಎಂದರು. ‘‘ನಿಮ್ಮ ಜತೆ ಬಿಜೆಪಿ ಸೇರಿದ್ದವರನ್ನು ಕರೆ ತರುತ್ತೀರಾ’’ ಎಂಬ ಪ್ರಶ್ನೆಗೆ, ‘‘2023ರ ಚುನಾವಣೆಯಲ್ಲಿ ಯಾರು ಎಲ್ಲಿರುತ್ತಾರೆ ಎಂಬುದು ಎಲ್ಲರಿಗೂ ತಿಳಿಯಲಿದೆ’’ ಎಂದರು.

    ಕೋಳಿ ಫಾರಂಗೆ ನುಗ್ಗಿ 200 ಕೋಳಿಗಳನ್ನು ತಿಂದು ಮುಗಿಸಿದ ಚಿರತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts