More

    ಕೋಲಿ, ಕಬ್ಬಲಿಗ ಸಮಾಜವನ್ನು ಎಸ್​ಟಿಗೆ ಸೇರ್ಪಡೆ ಮಾಡುವುದೇ ನನ್ನ ಗುರಿ; ಮಾಜಿ ಸಚಿವ ಬಾಬುರಾವ್ ಚಿಂಚನಸೂರ್

    ಕಲಬುರಗಿ: ತಾವು ಅವಕಾಶವಾದಿ ಎಂಬುವುದರಲ್ಲಿ ಯಾವುದೇ ಹುರಳಿಲ್ಲ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

    ತಾವು ಮತ್ತು ತಮ್ಮ ಧರ್ಮಪತ್ನಿ ಕಳೆದ ಅನೇಕ ವರ್ಷಗಳಿಂದ ಸಮಾಜ ಸೇವೆ ಮಾಡುತ್ತಿದ್ದು, ರಾಜಕೀಯಕ್ಕೆ ಬಂದ ನಂತರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲಾಗಿದೆ. ಕೋಲಿ, ಕಬ್ಬಲಿಗ ಸಮಾಜವನ್ನು ಎಸ್​ಟಿಗೆ ಸೇರ್ಪಡೆ ಮಾಡುವುದು ನನ್ನ ಗುರಿ. ಈ ಉದ್ದೇಶದಿಂದ ಬಿಜೆಪಿ ಸೇರ್ಪಡೆಯಾಗಿದ್ದೆ. ಅಧಿಕಾರ ಮುಗಿಯುತ್ತಾ ಬಂದರೂ ಬಿಜೆಪಿ ಸರ್ಕಾರ ಈ ಬಗ್ಗೆ ಚಕಾರ ಎತ್ತಲಿಲ್ಲ. ಸಮಾಜದ ಜನರ ಭಾವನೆಗಳಿಗೆ ಅವಮಾನ ಮಾಡಲಾಯಿತು‌. ಇದನ್ನು ಸಹಿಸದ ನಾನು ಬಿಜೆಪಿ ತೊರೆಯಬೇಕಾದ ಅನಿವಾರ್ಯತೆ ಬಂತು ಎಂದರು.

    ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಹತ್ಯೆ!

    ಕೋಲಿ,ಕಬ್ಬಲಿಗ ಸಮಾಜವನ್ನು ಎಸ್ಟಿ ಪಂಗಡಕ್ಕೆ ಸೇರ್ಪಡೆ ಮಾಡುವುದು ಮಲ್ಲಿಕಾರ್ಜುನ ಖರ್ಗೆ ಅವರಿಂದ ಮಾತ್ರ ಸಾಧ್ಯ. ಇದನ್ನು ಮನಗಂಡು, ಸಮಾಜದ ಜನರ ಒಳಿತಿಗಾಗಿ ಕಾಂಗ್ರೆಸ್ ಕೈ ಹಿಡಿದಿದ್ದೇನೆ. ಸಮಾಜಕ್ಕೆ ಅನ್ಯಾಯವಾದಾಗ ನಾನು ನಿರಂತರ ಹೋರಾಟ ಮಾಡಿದ್ದೆ. ಈಗಲೂ ಬಿಜೆಪಿ ಅನ್ಯಾಯ ಮಾಡಿದಾಗ ಸಹಿಸಿಕೊಳ್ಳಲು ಆಗಲಿಲ್ಲ. ಸಮಾಜದ ಜನ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

    ಕಲ್ಯಾಣ ಕರ್ನಾಟಕ ಪ್ರದೇಶ ಡಾ‌.ಮಲ್ಲಿಕಾರ್ಜುನ ಖರ್ಗೆ ಅವರ ಭದ್ರ ಕೋಟೆ. ಅವರನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.

    ಚಿತ್ತಾಪುರ ಮತಕ್ಷೇತ್ರದಿಂದ ಪ್ರಿಯಾಂಕ್ ಖರ್ಗೆ ಭಾರಿ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ. ಈಗ ನಾನು ಪ್ರಿಯಾಂಕ್ ಜತೆಗೆ ಇದ್ದುಕೊಂಡು ಕ್ಷೇತ್ರದ ಜನರು ಮತ್ತು ನಮ್ಮ ಸಮಾಜದ ಮತದಾರರಲ್ಲಿ ಮನವರಿಕೆ ಮಾಡಿಕೊಟ್ಟು ಅಭೂತಪೂರ್ವ ಗೆಲುವು ತಂದುಕೊಡಲಾಗುವುದು. ಪ್ರಿಯಾಂಕ್ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಾಬುರಾವ್ ಚಿಂಚನಸೂರ ಹೇಳಿದರು. ಇದನ್ನೂ ಓದಿ: ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts