

ಹಾಸನ: ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆಯೊಂದು ಮೃತಪಟ್ಟು ಹೊಳೆಯಲ್ಲಿ ಕೊಚ್ಚಿಕೊಂಡು ಬಂದಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕೆಂಪುಹೊಳೆಯಲ್ಲಿ ನಡೆದಿದೆ.
ತನ್ನ ತಾಯಿಯ ಜೊತೆ ನದಿ ದಾಟುವಾಗ ಕಾಲು ಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಮರಿಯಾನೆ 10 ದಿನಗಳ ಹಿಂದೆ ಜನಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಆನೆ ಮರಿಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.